
ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ವಿಚಾರವಾಗಿ ಸುಳ್ಳು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ ಆರೋಪದ ಮೇಲೆ ವಕೀಲ ಮಂಜುನಾಥ್ ಎನ್ ವಿರುದ್ಧ ಪ್ರಕರಣ ದಾಖಲಾಗಿದೆ,
ಧರ್ಮಸ್ಥಳ ನಿವಾಸಿ ರಘುರಾಮ ಶೆಟ್ಟಿ ನೀಡಿದ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ. ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಮಂಜುನಾಥ್ ಜುಲೈ 30 ರಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದರು.
ಪಾಯಿಂಟ್ ನಂಬರ್ 1ರಲ್ಲಿ 2 ಹೆಣ, ಪಾಯಿಂಟ್ ನಂ 2, 3ರಲ್ಲಿ ತಲಾ 2 ಹೆಣ, ಪಾಯಿಂಟ್ ನಂಬರ್ 4 ಮತ್ತು 5ರಲ್ಲಿ ತಲಾ 6 ಹೆಣ, ಪಾಯಿಂಟ್ ನಂಬರ್ 6, 7ರಲ್ಲಿ ತಲಾ 8 ಹೆಣ, ಪಾಯಿಂಟ್ ನಂಬರ್ 9ರಲ್ಲಿ 6-7 ಹೆಣ, ಪಾಯಿಂಟ್ ನಂಬರ್ 10ರಲ್ಲಿ 3, 11ರಲ್ಲಿ 9 ಹೆಣ, ಪಾಯಿಂಟ್ ನಂಬರ್ 12ರಲ್ಲಿ 4-5 ಹೆಣ ಪಾಯಿಂಟ್ ನಂ 13ರಲ್ಲಿ ಯಥೇಚ್ಛವಾಗಿ ಹೆಣ ಹೂತಿದ್ದಾಗಿ ವಕೀಲ ಮಂಜುನಾಥ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದರು.
ಈ ಸಂಬಂಧ ಧರ್ಮಸ್ಥಳ ನಿವಾಸಿ ರಘುರಾಮ್ ಶೆಟ್ಟಿ (44) ಅವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಆಧರಿಸಿ, ಬಿಎನ್ಎಸ್ ಕಾಯ್ದೆ 353(1)ಬಿ, 353(2)ರ ಅಡಿ ಎಫ್ಐಆರ್ ದಾಖಲಾಗಿದೆ.
Advertisement