ಹಿಂದೂ ಧರ್ಮ ದುರ್ಬಲಗೊಳಿಸಲು ಪಿತೂರಿ ನಡೆಯುತ್ತಿದೆ, ಧರ್ಮಸ್ಥಳದ ವಿರುದ್ಧ ಮಾಡುತ್ತಿರುವ ಆರೋಪ ಕೂಡ ಅದರದ್ದೇ ಭಾಗ: ವೀರೇಂದ್ರ ಹೆಗಡೆ

ನಮ್ಮ ಹಿಂದೂ ಧರ್ಮ ಮತ್ತು ಸಂಪ್ರದಾಯಗಳನ್ನು ದುರ್ಬಲಗೊಳಿಸಲು ಪಿತೂರಿ ನಡೆಯುತ್ತಿದ್ದು, ಇದರ ಬಗ್ಗೆ ನಾವೆಲ್ಲರೂ ಹೆಚ್ಚು ಜಾಗರೂಕರಾಗಿರಬೇಕು, ನಾವು ನಮ್ಮ ಧರ್ಮವನ್ನು ರಕ್ಷಿಸಬೇಕಾಗಿದೆ.
Veerendra Heggade, Dharmadhikari of Dharmasthala Manjunatha Swamy Temple
ಡಾ ಡಿ ವೀರೇಂದ್ರ ಹೆಗ್ಗಡೆ
Updated on

ಹುಬ್ಬಳ್ಳಿ: ಹಿಂದೂ ಧರ್ಮ ಮತ್ತು ಸಂಪ್ರದಾಯಗಳನ್ನು ದುರ್ಬಲಗೊಳಿಸಲು ಪಿತೂರಿಗಳು ನಡೆಯುತ್ತಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಮಾಡುತ್ತಿರುವ ಆರೋಪಗಳು, ಅಪಪ್ರಚಾರ ಮತ್ತು ತಪ್ಪು ಮಾಹಿತಿಗಳೂ ಕೂಡ ಇದರದ್ದೇ ಭಾಗವೇ ಆಗಿದೆ ಎಂದು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಶುಕ್ರವಾರ ಹೇಳಿದ್ದಾರೆ.

ಹುಬ್ಬಳ್ಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮತಾನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಕೇಳಿ ಬರುತ್ತಿರುವ ಎಲ್ಲಾ ಆರೋಪಗಳು ಆಧಾರರಹಿತವಾಗಿವೆ. ಅವುಗಳನ್ನು ಬೆಂಬಲಿಸಲು ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ್ದಾರೆ.

ಇಲ್ಲಿಯವರೆಗೆ 17 ಸ್ಥಳಗಳನ್ನು ಅಗೆದು ತೆಗೆಯಲಾಗಿದೆ, ಆದರೆ, ಅಲ್ಲಿ ಏನೂ ಕಂಡು ಬಂದಿಲ್ಲ. ನಮ್ಮ ಹಿಂದೂ ಧರ್ಮ ಮತ್ತು ಸಂಪ್ರದಾಯಗಳನ್ನು ದುರ್ಬಲಗೊಳಿಸಲು ಪಿತೂರಿ ನಡೆಯುತ್ತಿದ್ದು, ಇದರ ಬಗ್ಗೆ ನಾವೆಲ್ಲರೂ ಹೆಚ್ಚು ಜಾಗರೂಕರಾಗಿರಬೇಕು, ನಾವು ನಮ್ಮ ಧರ್ಮವನ್ನು ರಕ್ಷಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

ಮಾಜಿ ಶಾಸಕ ಅಶೋಕ್ ಕಟವೆ ಅವರು ಮಾತನಾಜಿ, ಧರ್ಮಸ್ಥಳ ನಮ್ಮ ಸಂಸ್ಕೃತಿ, ಧರ್ಮ ಮತ್ತು ಆಧ್ಯಾತ್ಮಿಕ ಶಕ್ತಿಯ ಸಂಕೇತವಾಗಿದೆ. ಅದರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿರುವುದು ನಿಜಕ್ಕೂ ನೋವುಂಟು ಮಾಡುತ್ತಿದೆ. ಪ್ರಸ್ತುತ ಕೇಳಿ ಬರುತ್ತಿರುವ ಆರೋಪಗಳು ಧಾರ್ಮಿಕ ಶ್ರದ್ಧಾ ಕೇಂದ್ರಗಳ ವಿರುದ್ಧದ ವ್ಯವಸ್ಥಿತ ಪಿತೂರಿಯಾಗಿದೆ ಎಂದು ಹೇಳಿದ್ದಾರೆ.

ಸರ್ಕಾರ ಈ ಪಿತೂರಿಯ ವಿರುದ್ಧ ತನಿಖೆ ನಡೆಸಬೇಕು. ನಾವು ಸುಮ್ಮನಿರುವುದಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಹೋರಾಟ ಮುಂದುವರೆಸುತ್ತೇವೆ. ಧರ್ಮಸ್ಥಳದ ಪಾವಿತ್ರ್ಯವನ್ನು ಯಾವುದೇ ಶಕ್ತಿ ಕದಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ವ್ಯವಸ್ಥಿತ ಪ್ರಚಾರದ ಪಿತೂರಿಯೆಂದು ಖಂಡಿಸಿದ್ದಾರೆ.

Veerendra Heggade, Dharmadhikari of Dharmasthala Manjunatha Swamy Temple
ವೀರೇಂದ್ರ ಹೆಗ್ಗಡೆ ಸಂದರ್ಶನ: ಧರ್ಮಸ್ಥಳದಲ್ಲಿ ಸರಣಿ ಕೊಲೆ ಆರೋಪ 'ಆಧಾರ ರಹಿತ'; SIT ಮಾಡಿದ್ದು ಒಳ್ಳೆಯದು..

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com