ಬಿ.ಎಲ್ ಸಂತೋಷ್ ವಿರುದ್ಧ ಹೇಳಿಕೆ: ಮಹೇಶ್ ತಿಮರೋಡಿಗೆ ಷರತ್ತು ಬದ್ಧ ಜಾಮೀನು; ಧರ್ಮಸ್ಥಳ ಪ್ರಕರಣದಲ್ಲಿ ಮತ್ತೆ ಬಂಧನದ ಭೀತಿ?

ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿ ಜಾಮೀನು ನೀಡಲಾಗಿದೆ.
Mahesh Shetty Thimarodi
ಮಹೇಶ್ ತಿಮರೋಡಿ
Updated on

ಉಡುಪಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಮಹೇಶ್‌ ಶೆಟ್ಟಿ ತಿಮರೋಡಿಗೆ ಇಂದು ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಇದಕ್ಕೂ ಮುನ್ನ ಉಡುಪಿ ನ್ಯಾಯಾಲಯದಲ್ಲಿ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಪರ ವಾದ ಮಂಡಿಸಿದ ವಕೀಲರು, ಬಂಧಿಸಿದ ಪ್ರಕ್ರಿಯೆ ಕ್ರಮಬದ್ಧವಾಗಿಲ್ಲ. ಪ್ರಥಮ ನೋಟಿಸ್ ನೀಡಿ ಅದರ ಅವಧಿ ಮುಗಿಯುವ ಮುನ್ನವೇ ಎರಡನೇ ನೋಟಿಸ್ ನೀಡಿದ್ದಾರೆ. ತಿಮರೋಡಿಯವರ ಹೇಳಿಕೆಯಿಂದ ಯಾವುದೇ ಕೋಮು ಗಲಭೆಗಳು ಆಗಿಲ್ಲ. ತಿಮರೋಡಿ ಕೂಡ ಓರ್ವ ಹಿಂದೂ ನಾಯಕ. ಇನ್ನೊಂದು ಧರ್ಮವನ್ನು ಅವರು ದೂಷಿಸಿಲ್ಲ ಎಂದು ಹೇಳಿದರು.

ಈ ವೇಳೆ ಪ್ರತಿವಾದಿಗಳಿಂದ ಆಕ್ಷೇಪ ಮಾಡಲಾಯಿತು. ಆದರೆ, ವಾದ ವಿವಾದ ಆಲಿಸಿದ ನ್ಯಾಯಾಧೀಶ ನಾಗೇಶ್, ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿ ಜಾಮೀನು ನೀಡಲಾಗಿದೆ

ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಆ.21ರಂದು ಬ್ರಹ್ಮಾವರ ಪೊಲೀಸರು ಬಂಧಿಸಿದ್ದರು. ಇದಾದ ನಂತರ ಮಹೇಶ ಶೆಟ್ಟಿ ತಿಮರೋಡಿ ಸಲ್ಲಿಸಿದ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ ಆಗಸ್ಟ್ 23ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

ಇಂದು ಪುನಃ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ 2 ಗಂಟೆಗಳ ಕಾಲ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರ ವಿಚಾರಣೆಗೆ ಒಪ್ಪಿಸಿ ಕಾಲಾವಕಾಶ ನೀಡಿತ್ತು. ಪೊಲೀಸರು ವಿಚಾರಣೆ ನಡೆಸಿದ ನಂತರ ಪುನಃ ಕೋರ್ಟ್ ಮುಂದೆ ಹಾಜರುಪಡಿಸಿದಾಗ ಎರಡೂ ಕಡೆ ವಕೀಲರ ವಾದ ಆಲಿಸಿದ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Mahesh Shetty Thimarodi
Dharmasthala case: ನಿರೀಕ್ಷಣಾ ಜಾಮೀನಿನ ಬಳಿಕ ಪೊಲೀಸ್ ಸಮನ್ಸ್ ಜಾರಿ; YouTuber MD Sameer ಗೆ ಬಂಧನ ಭೀತಿ

ಮತ್ತೊಂದೆಡೆ ಧರ್ಮಸ್ಥಳ ಪ್ರಕರಣದಲ್ಲಿ ಮಹೇಶ್ ತಿಮರೋಡಿ ಮನೆಯಲ್ಲಿ ನಾಲ್ಕು ದಿನಗಳ ಕಾಲ ನಾನು ಇದ್ದಿದ್ದು ನಿಜ ಎಂದು ಸುಜಾತ್ ಭಟ್ ಹೇಳಿಕೆ ನೀಡಿದ್ದು, ಇದರಲ್ಲಿ ಮತ್ತೆ ಬಂಧನಕ್ಕೊಳಗಾಗುವ ಸಾಧ್ಯತೆಯೂ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com