ಬೆಂಗಳೂರು: ಟ್ರಾಫಿಕ್‌ ಫೈನ್‌ ಪಾವತಿಗೆ ಶೇ.50ರಷ್ಟು ರಿಯಾಯಿತಿ; ಮೊದಲ ದಿನವೇ ಜನರಿಂದ ಉತ್ತಮ ಸ್ಪಂದನೆ, 4.18 ಕೋಟಿ ರೂ ದಂಡ ಸಂಗ್ರಹ..!

ಸಂಚಾರ ನಿಯಮ ಉಲ್ಲಂಘನೆಯ ಹಳೇ ಪ್ರಕರಣಗಳಲ್ಲಿ ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸೆ.19 ವರೆಗೆ ದಂಡ ಪಾವತಿಗೆ ಸರ್ಕಾರ ಶೇ,50 ರಷ್ಟು ರಿಯಾಯಿತಿ ನೀಡಿದೆ.
Bengaluru traffic Police
ಬೆಂಗಳೂರು ಟ್ರಾಫಿಕ್ ಪೊಲೀಸರು (ಸಂಗ್ರಹ ಚಿತ್ರ)
Updated on

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಯ ಪ್ರಕರಣಗಳಲ್ಲಿ ಬಾಕಿ ಇರುವ ದಂಡ ಪಾವತಿಗೆ ಶೇ.50 ರಷ್ಟು ರಿಯಾಯಿತಿಗೆ ಮೊದಲ ದಿನವೇ ರಾಜಧಾನಿಯಲ್ಲಿ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಒಂದೇ ದಿನದಲ್ಲಿ 1.48 ಲಕ್ಷ ಪ್ರಕರಣಗಳು ವಿಲೇವಾರಿಯಾಗಿದ್ದು, 4.18 ಕೋಟಿ ರೂ.ದಂಡ ವಸೂಲಿ ಆಗಿದೆ. ಸಂಚಾರ ನಿಯಮ ಉಲ್ಲಂಘನೆಯ ಹಳೇ ಪ್ರಕರಣಗಳಲ್ಲಿ ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸೆ.19 ವರೆಗೆ ದಂಡ ಪಾವತಿಗೆ ಸರ್ಕಾರ ಶೇ,50 ರಷ್ಟು ರಿಯಾಯಿತಿ ನೀಡಿದೆ.

ಈ ರಿಯಾಯಿತಿ ಅವಧಿ ಶನಿವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ದಿನ 1,48,747 ಪ್ರಕರಣಗಳಲ್ಲಿ 4,18,20,500 ರೂ..ದಂಡ ಸಂಗ್ರಹವಾಗಿದೆ.

ದಂಡ ಪಾವತಿಗೆ ನಾಗರಿಕರಿಗೆ ಪೊಲೀಸರು ಅವಕಾಶ ಕಲ್ಪಿಸಿದ್ದು, ಕರ್ನಾಟಕ ಸ್ಟೇಟ್ ಪೊಲೀಸ್ (ಕೆಎಸ್‌ಪಿ) ಆ್ಯಪ್, ಬೆಂಗಳೂರು ಪೊಲೀಸರ ಬಿಟಿಪಿ ಆಸ್ಲಂ ಆ್ಯಪ್, ಕರ್ನಾಟಕ ಒನ್/ಬೆಂಗಳೂರು ಒನ್ ವೆಬ್ ಸೈಟ್‌ನಲ್ಲಿ ದಂಡ ಪಾವತಿಸಬಹುದು. ಅಲ್ಲದೆ, ಸ್ಥಳೀಯ ಸಂಚಾರ ಠಾಣೆ ಹಾಗೂ ಸಂಚಾರ ನಿರ್ವಹಣಾ ಕೇಂದ್ರ (ಟಿಎಂಸಿದಲ್ಲಿ ಕೂಡ ವಾಹನ ನೋಂದಣಿ ಸಂಖ್ಯೆ ಪರಿಶೀಲಿಸಿ ಮಾಹಿತಿ ಪಡೆದು, ದಂಡ ಪಾವತಿಸಬಹುದಾಗಿದೆ.

Bengaluru traffic Police
ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ಡಿಸ್ಕೌಂಟ್ ಘೋಷಣೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com