
ಬೆಂಗಳೂರು: 4 ದಿನಗಳ ಹಿಂದಷ್ಟೇ ಜನ್ಮ ನೀಡಿದ್ದ ಮಗುವಿನಲ್ಲಿ ಅನಾರೋಗ್ಯ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ನೊಂದ ಮಹಿಳೆಯೊಬ್ಬರು ಲಾಲ್ ಬಾಗ್ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶನಿವಾರ ನಡೆದಿದೆ.
ಮೃತ ಮಹಿಳೆಯನ್ನು ಮೃತರನ್ನು ಜೆನಿಶಾ ನಾಥ್ (22) ಎಂದು ಗುರುತಿಸಲಾಗಿದೆ. ಈಕೆ ನಾಲ್ಕು ವರ್ಷಗಳ ಹಿಂದೆ ನವನಾಥ್ ರಾಜ್ ಎಂಬುವವರನ್ನು ವಿವಾಹವಾಗಿದ್ದರು. ದಂಪತಿಗಳು ಕಳೆದ ಮೂರು ವರ್ಷಗಳಿಂದ ಸರ್ಜಾಪುರ ಪ್ರದೇಶದಲ್ಲಿ ವಾಸಿಸುತ್ತಿದ್ದರು. ರಾಜ್ ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಪತಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ.
ಬೆಳಿಗ್ಗೆ 6.30 ರ ಸುಮಾರಿಗೆ, ಲಾಲ್‌ಬಾಗ್ ಭದ್ರತಾ ಸಿಬ್ಬಂದಿಯೊಬ್ಬರು ಕೆರೆಯಲ್ಲಿ ಶವವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರಂಭದಲ್ಲಿ, ಮಹಿಳೆಯ ಗುರುತು ಪತ್ತೆಯಾಗಿರಲಿಲ್ಲ, ಆದರೆ. ನಂತರ ಅವರು ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ವಾಣಿ ವಿಲಾಸ್ ಆಸ್ಪತ್ರೆಯಿಂದ ಬೆಳಿಗ್ಗೆ 4 ಗಂಟೆ ಸುಮಾರಿಗೆ ಮಹಿಳೆಯೊಬ್ಬರು ನಾಪತ್ತೆಯಾಗಿದ್ದಾರೆಂಬುದು ತಿಳಿದುಬಂದಿದೆ.
ಜೆನಿಷಾ ಆಸ್ಪತ್ರೆಯಲ್ಲಿ ಕಾಣೆಯಾಗಿರುವುದನ್ನುಗಮನಿಸಿ ಕುಟುಂಬ ಸದಸ್ಯರು ದೂರು ದಾಖಲಿಸಲು ಪೊಲೀಸ್ ಠಾಣೆಗೆ ಹೋಗಿದ್ದಾರೆ. ಈ ವೇಳೆ ಅನುಮಾನಗೊಂಡ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ಕರೆದೊಯ್ದಿದ್ದಾರೆ. ಬಳಿಕ ಕುಟುಂಬಸ್ಥರು ಮೃತದೇಹವನ್ನು ಪತ್ತೆ ಮಾಡಿದ್ದಾರೆ.
ಆಸ್ಪತ್ರೆಯು ಲಾಲ್‌ಬಾಗ್‌ನಿಂದ ಸುಮಾರು 3 ಕಿ.ಮೀ ದೂರದಲ್ಲಿದೆ. ಮಹಿಳೆ ಉದ್ಯಾನವನಕ್ಕೆ ಬಂದಾಗ ಭದ್ರತಾ ಸಿಬ್ಬಂದಿಗಳು ಬೆಳಗಿನ ನಡಿಗೆಗೆ ಬಂದಿದ್ದಾರೆಂದು ಭಾವಿಸಿ ಒಳಗೆ ಬಿಟ್ಟಿದ್ದಾರೆ. ನಂತರ ಈಕೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ವರದಿಗಳು ತಿಳಿಸಿವೆ.
ಆಗಸ್ಟ್ 16 ರಂದು ಜೆನಿಷಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮರುದಿನ, ನವಜಾತ ಶಿಶು ಲಿವರ್ ಸಂಬಂಧಿಸಿದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದೆ ಎಂಬುದು ತಿಳಿದುಬಂದಿದೆ. ಮಗುವಿನ ಸ್ಥಿತಿಯ ಬಗ್ಗೆ ಜೆನಿಷಾ ಅತೀವ್ರವಾಗಿ ನೊಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೂ, ಪ್ರಸವಾನಂತರದ ಖಿನ್ನತೆಯಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. .
Advertisement