
ಬೆಂಗಳೂರು: ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ 'ಪಪ್ಪಿ' ಅವರನ್ನು ಆಗಸ್ಟ್ 28 ರವರೆಗೆ ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ನೀಡಿ ಭಾನುವಾರ ಇಲ್ಲಿನ ನ್ಯಾಯಾಲಯ ಆದೇಶ ನೀಡಿದೆ.
ಮೂಲಗಳ ಪ್ರಕಾರ, ಶಾಸಕರನ್ನು ಇಂದು ಬೆಳಿಗ್ಗೆ ಸಿಕ್ಕಿಂನಿಂದ ಬೆಂಗಳೂರಿಗೆ ಕರೆತರಲಾಗಿದೆ.
ಅವರು ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಇ.ಡಿ ವಿಶೇಷ ತಂಡ ಅವರನ್ನು ವಶಕ್ಕೆ ತೆಗೆದುಕೊಂಡಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.
ಶುಕ್ರವಾರ ಪಪ್ಪಿ (50), ಆತನ ಸಹೋದರ ಮತ್ತು ಇತರರ ವಿರುದ್ಧ ಅಕ್ರಮ ಬೆಟ್ಟಿಂಗ್-ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದ ಭಾಗವಾಗಿ ಕೇಂದ್ರೀಯ ತನಿಖಾ ಸಂಸ್ಥೆಯು ಹಲವಾರು ರಾಜ್ಯಗಳಲ್ಲಿ ಶೋಧ ನಡೆಸಿತು.
Advertisement