
ಬೆಳ್ತಂಗಡಿ: ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳ ಕುಟುಂಬದ ವಿರುದ್ದ ಯೂಟ್ಯೂಬ್ ಮೂಲಕ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿ (Mohamed Sameer) ಕೊನೆಗೂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ.
ಬೆಳ್ತಂಗಡಿ ಠಾಣೆ ಪೊಲೀಸರ ಮುಂದೆ ಇಂದು ವಿಚಾರಣೆಗೆ ಹಾಜರಾಗಿರುವ ಎಂಡಿ ಸಮೀರ್, ತಮ್ಮ ಮೂರು ವಕೀಲರೊಂದಿಗೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.
ಸಮೀರ್ ಎಂಡಿ ವಿರುದ್ದ ಬೆಳ್ತಗಂಡಿ ಪೊಲೀಸ್ ಠಾಣೆಗೆ ದೂರು ದಾಖಲಾಗಿತ್ತು. ಆದರೆ ಬಂಧನಕ್ಕೂ ಮೊದಲು ನಿರೀಕ್ಷಣಾ ಜಾಮೀನು ಪಡೆದಿದ್ದ ಸಮೀರ್ ಗೆ ಎರಡು ದಿನದಲ್ಲಿ ವಿಚಾರಣೆಗೆ ಹಾಜರಾಗಲು ಕೋರ್ಟ್ ಸೂಚಿಸಿತ್ತು. ಹೀಗಾಗಿ ಇದೀಗ ಸಮೀರ್ ಎಂಡಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾನೆ.
ಮೂವರು ವಕೀಲರ ಜೊತೆ ಸಮೀರ್ ಎಂಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದು, ಬೆಳ್ತಗಂಡಿ ಪೊಲೀಸರು ಸಮೀರ್ ಎಂಡಿಗೆ ಮೂರು ಬಾರಿ ನೋಟಿಸ್ ನೀಡಲಾಗಿತ್ತು. ಬಂಧನ ಭೀತಿಯಲ್ಲಿದ್ದ ಸಮೀರ್ ಮಂಗಳೂರು ಕೋರ್ಟ್ ಮೂಲಕ ನಿರೀಕ್ಷಣಾ ಜಾಮೀನು ಪಡೆದಿದ್ದರು.
ಹೀಗಾಗಿ ಪೊಲೀಸರು ಬಂಧನ ಕಾರ್ಯಾಚರಣೆ ನಿಲ್ಲಿಸಿದ್ದರು. ಇಂದು ಕೋರ್ಟ್ ನೀಡಿದ ಗಡುಗು ಅಂತ್ಯಗೊಳ್ಳುತ್ತಿದ್ದಂತೆ ಸಮೀರ್ ಎಂಡಿ ಬೆಳ್ತಂಗಡಿ ಪೊಲೀಸರ ಮುಂದೆ ಹಾಜರಾಗಿದ್ದಾರೆ.
ತನಿಖಾಧಿಕಾರಿ ನಾಗೇಶ್ ಕೆ ವಿಚಾರಣೆ
ತನಿಖಾಧಿಕಾರಿ ನಾಗೇಶ್ ಕೆ ವಿಚಾರಣೆ ನಡೆಸುತ್ತಿದ್ದು, ಸಮೀರ್ ಎಂಡಿ ಬೆಳ್ತಂಗಡಿ ಠಾಣೆಯಲ್ಲೇ ವಿಚಾರಣೆ ನಡೆದಿದೆ ಎನ್ನಲಾಗಿದೆ. ಕೆಲ ದಾಖಲೆ ಪತ್ರಗಳನ್ನು ಹಿಡಿದು ಸಮೀರ್ ಎಂಡಿ ಬೆಳ್ತಗಂಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದು, ಧರ್ಮಸ್ಥಳದಲ್ಲಿ ಭದ್ರತೆ ಸಮಸ್ಯೆ ಕಾಡಲಿದೆ ಎಂದು ಸಮೀರ್ ಎಂಡಿ ನಿರೀಕ್ಷಾ ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಿದ್ದ. ಹೀಗಾಗಿ ಧರ್ಮಸ್ಥಳ ಠಾಣೆ ಬದಲು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ.
ಮೂರು ಬಾರಿ ನೊಟೀಸ್ ಕೊಟ್ಟರೂ ಹಾಜರಾಗದೇ ತಪ್ಪಿಸಿಕೊಂಡಿದ್ದ ಸಮೀರ್, ಇದೀಗ ಬಂಧನ ತಪ್ಪಿಸಿಕೊಳ್ಳಲು ಸಮೀರ್ ವಿಚಾರಣೆಗೆ ಹಾಜರಾಗಿದ್ದಾನೆ. ಬೆಳಗ್ಗೆ 10:30ರ ವೇಳೆಗೆ ವಿಚಾರಣೆಗೆ ಬರುವುದಾಗಿ ಹೇಳಿದ್ದ ಸಮೀರ್ ವಕೀಲರೊಂದಿಗೆ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಹಾಜರಾಗಿದ್ದಾನೆ. ಕೂಲಿಂಗ್ ಗ್ಲಾಸ್ ಧರಿಸಿದ್ದ ಸಮೀರ್ ಮುಗುಳು ನಗೆ ಬೀರುತ್ತಲೇ ವಿಚಾರಣೆಗೆ ಹಾಜರಾಗಿದ್ದು, ಸಕಲ ತಯಾರಿ ಮಾಡಿಕೊಂಡಿದ್ದ ಎಸ್‌ಐಟಿ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.
ಏನಿದು ಪ್ರಕರಣ?
ಧರ್ಮಸ್ಥಳ ದೇಗುಲ ವಿರುದ್ಧ ಅಪಪ್ರಚಾರ ಆರೋಪದಲ್ಲಿ 'ದೂತ' ಯೂಟ್ಯೂಬ್ ವಾಹಿನಿಯ ಸಮೀರ್‌ಗೆ ಕೋರ್ಟ್ ಇತ್ತೀಚೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಧರ್ಮಸ್ಥಳದಲ್ಲಿ ಅಪಪ್ರಚಾರದ ಆರೋಪ ಎದುರಿಸುತ್ತಿರೋ ಸಮೀರ್, ತಮ್ಮ ವಿಡಿಯೋದಲ್ಲಿ ದಂಗೆ ಏಳುವಂತೆ ಜನರಿಗೆ ಪ್ರಚೋದಿಸಿದ್ದ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆಯಲ್ಲಿ ದೊಂಬಿ, ಪ್ರಚೋದನೆ ಸೇರಿದಂತೆ ಹಲವು ಪ್ರಕರಣಗಳ ಅಡಿಯಲ್ಲಿ ಕೇಸ್‌ಗಳು ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ನೀಡಿದ್ದ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಕೋರ್ಟ್ ಜಾಮೀನು ಬಳಿಕ ಧರ್ಮಸ್ಥಳದಲ್ಲಿ ತನಗೆ ಜೀವ ಬೆದರಿಕೆ ಇರುವುದಾಗಿ ಹೇಳಿಕೊಂಡಿದ್ದ. ಈ ಹಿನ್ನೆಲೆ ಬೆಳ್ತಂಗಡಿ ಠಾಣೆಗೆ ಹಾಜರಾಗಲು ಪೊಲೀಸರು ಸೂಚಿಸಿದ್ದರು.
Advertisement