ಬೆಂಗಳೂರಿನಲ್ಲಿ Hit And Run: ಒನ್ ವೇಯಲ್ಲಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಕಾರು; ಫ್ಲೈಓವರ್ ಮೇಲಿಂದ ಬಿದ್ದು ಮಹಿಳೆ ಸಾವು

ಬೈಕ್ ನಲ್ಲಿ ಫ್ಲೈ ಓವರ್ ಮೇಲೆ ದಂಪತಿ ಹೋಗುತ್ತಿದ್ದರು. ಈ ವೇಳೆ ಒನ್​ ವೇಯಲ್ಲಿ ಬರುತ್ತಿದ್ದ ಕಾರು ವೇಗವಾಗಿ ಬಂದು ಬೈಕ್​ಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಪ್ಲೈಓವರ್​ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.
Accident
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಹಿಟ್ ಅಂಡ್ ರನ್‌ಗೆ ಫ್ಲೈಓವರ್ ಮೇಲಿಂದ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ಸಮೀಪದ ಬಚ್ಚಳ್ಳಿ ಗೇಟ್ ಫ್ಲೈಓವರ್ ಮೇಲೆ ನಡೆದಿದೆ.

ಬೈಕ್ ನಲ್ಲಿ ಫ್ಲೈ ಓವರ್ ಮೇಲೆ ದಂಪತಿ ಹೋಗುತ್ತಿದ್ದರು. ಈ ವೇಳೆ ಒನ್​ ವೇಯಲ್ಲಿ ಬರುತ್ತಿದ್ದ ಕಾರು ವೇಗವಾಗಿ ಬಂದು ಬೈಕ್​ಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಪ್ಲೈಓವರ್​ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿ ಆಗಿದೆ. ನೇತ್ರಾವತಿ ಹಿಟ್ ಆ್ಯಂಡ್ ರನ್​ಗೆ ಬಲಿಯಾದ ಮಹಿಳೆ.

ದೇವನಹಳ್ಳಿ ರಾಷ್ಟ್ರೀಯ ಹೆದ್ದಾರಿ ಬಚ್ಚಹಳ್ಳಿ ಬ್ರಿಡ್ಜ್ ಮೇಲೆ ಈ ಭೀಕರ ಅಪಘಾತ ಸಂಭವಿಸಿದ್ದು, ಬೈಕ್​ಗೆ ಡಿಕ್ಕಿ ಹೊಡೆದ ಕಾರು ಚಾಲಕ ಕಾರನ್ನ ನಿಲ್ಲಿಸದೆ ಪರಾರಿಯಾಗಿದ್ದಾನೆ. ನೇತ್ರಾವತಿ ಹಾಗೂ ಆಕೆಯ ಪತಿ ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಕಡೆಗೆ ಹೋಗುತ್ತಿದ್ದರು ಎನ್ನಲಾಗ್ತಿದೆ. ಈ ಮಹಿಳೆ ಬೆಂಗಳೂರಿನ ಬಾಣಸವಾಡಿ ಮೂಲದವರಾಗಿದ್ದಾರೆ. ಕಾರು ಗುದ್ದಿದ ರಭಸಕ್ಕೆ ಬೈಕ್ ನಿಂದ ಮಹಿಳೆ ನೇತ್ರಾವತಿ ಫ್ಲೈಓವರ್ ಕೆಳಗೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನೇತ್ರಾವತಿ ಬಲ ಭಾಗಕ್ಕೆ ಬಿದ್ದಿದ್ದಾರೆ, ಪತಿ ಬೈಕ್​ನ ಎಡ ಭಾಗಕ್ಕೆ ಬಿದ್ದಿದ್ದಾರೆ. ಅವರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Accident
ಬೆಂಗಳೂರು: ಬೈಕ್-ಲಾರಿ ಅಪಘಾತ; ವರಮಹಾಲಕ್ಷ್ಮಿ ಹಬ್ಬಕ್ಕಾಗಿ ಬಂದಿದ್ದ ನವ ವಿವಾಹಿತೆ ಸಾವು; ಸುದ್ದಿ ಕೇಳಿ ಅಜ್ಜಿಯೂ ನಿಧನ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com