'ಅರಿಶಿನ-ಕುಂಕುಮ ಲೇಪಿಸಿ ಕನ್ನಡವನ್ನು ಭುವನೇಶ್ವರಿಯಾಗಿ ಮಾಡಿಬಿಟ್ಟಿರಿ, ನಾನೆಲ್ಲಿ ನಿಲ್ಲಬೇಕು' ಎಂದಿದ್ದ ಬಾನು ಮುಷ್ತಾಕ್ ಹಳೆಯ ವಿಡಿಯೋ ವೈರಲ್

ಕನ್ನಡವನ್ನು ಕನ್ನಡ ಭುವನೇಶ್ವರಿಯಾಗಿ ಮಾಡಿಬಿಟ್ಟಿರಿ. ಕೆಂಪು ಮತ್ತು ಹಳದಿ, ಅರಿಶಿನ-ಕುಂಕುಮದ ಬಾವುಟ ಹಾಕಿ, ಅರಿಶಿನ-ಕುಂಕುಮದ ಲೇಪಿಸಿ ಭುವನೇಶ್ವರಿಯಾಗಿ ಮಂದಾಸನದ ಮೇಲೆ ಕೂರಿಸಿ ಬಿಟ್ಟಿರಿ. ನಾನೆಲ್ಲಿ ನಿಲ್ಲಬೇಕು. ನಾನೇನನ್ನು ನೋಡಲಿ.
Banu mushtaq
ಬಾನು ಮುಷ್ತಾಕ್
Updated on

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರು ಬುಕ‌ರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರ ಹೆಸರನ್ನು ಘೋಷಿಸಿದ್ದು, ಇದರ ಬೆನ್ನಲ್ಲೇ ಜನ ಸಾಹಿತ್ಯ ಸಮ್ಮೇಳನ -2023ರಲ್ಲಿ ಬಾನು ಮುಷ್ತಾಕ್ ರವರು ಮಾಡಿರುವ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಈ ವಿಡಿಯೋವನ್ನು ಹಂಚಿಕೊಂಡಿಕೊಂಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ ಬೂಕರ್ ಭಾನು? ಎಂದು ಪ್ರಶ್ನಿಸಿದ್ದಾರೆ.

ಇದೇ ವಿಡಿಯೋವನ್ನು ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ ಅವರೂ ಹಂಚಿಕೊಂಡಿದ್ದು, ಕನ್ನಡ ಭುವನೇಶ್ವರಿಯನ್ನು ಸಹಿಸಲಾಗದವರು ಚಾಮುಂಡಿ ತಾಯಿಯ ವೈಭವಕ್ಕೆ ತಲೆಬಾಗಲು ಒಪ್ಪಿದ್ದಾದರೂ ಏಕೆ? ಎಂದು ಪ್ರಶ್ನಿಸಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ಬಾನು ಮುಷ್ತಕ್ ಅವರು, ಬಿಳಿಮಿಲೆ ಅವರು, ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಮಾತನಾಡಿದರು. ಒಬ್ಬ ಅಲ್ಪ ಸಂಖ್ಯಾತ ಮಹಿಳೆಯಾಗಿ ನನ್ನ ಗ್ರಹಿಕೆ ಏನು ಎಂಬುದನ್ನು ನಿಮ್ಮ ಮುಂದಿಡುತ್ತಿದ್ದೇನೆ. ನಿಮಗೆ ಇಷ್ಟ ಆಗುತ್ತೋ, ಕಷ್ಟ ಆಗುತ್ತೋ ನನಗೆ ಗೊತ್ತಿಲ್ಲ. ಕನ್ನಡವನ್ನು ಭಾಷೆಯಾಗಿ ಬೆಳೆಯಲು, ಕನ್ನಡವನ್ನು ಭಾಷೆಯಾಗಿ ಬಾನು ಮುಷ್ತಾಕ್ ಮಾತನಾಡುವುದಕ್ಕೆ, ಆಕೆಯ ಮನೆಯವರು ಮಾತನಾಡುವುದಕ್ಕೆ ನೀವು ಅವಕಾಶವನ್ನೇ ನೀಡಲಿಲ್ಲ ಎಂದು ಹೇಳಿರುವುದು ಕಂಡು ಬಂದಿದೆ.

ಕನ್ನಡವನ್ನು ಕನ್ನಡ ಭುವನೇಶ್ವರಿಯಾಗಿ ಮಾಡಿಬಿಟ್ಟಿರಿ. ಕೆಂಪು ಮತ್ತು ಹಳದಿ, ಅರಿಶಿನ-ಕುಂಕುಮದ ಬಾವುಟ ಹಾಕಿ, ಅರಿಶಿನ-ಕುಂಕುಮದ ಲೇಪಿಸಿ ಭುವನೇಶ್ವರಿಯಾಗಿ ಮಂದಾಸನದ ಮೇಲೆ ಕೂರಿಸಿ ಬಿಟ್ಟಿರಿ. ನಾನೆಲ್ಲಿ ನಿಲ್ಲಬೇಕು. ನಾನೇನನ್ನು ನೋಡಲಿ, ನಾನೆಲ್ಲಿ ತೊಡಗಿಕೊಳ್ಳಬೇಕು? ನನ್ನನ್ನು ಹೊರಗಟ್ಟವಿಕೆ ಇಂದಿನಿಂದಲ್ಲ, ಎಂದಿನಿಂದಲೋ ಆರಂಭವಾಗಿತ್ತು. ಆದರೆ, ಇಂದು ಪೂರ್ಣಗೊಂಡಿದೆಯಷ್ಟೇ ಎಂದು ಹೇಳಿದ್ದಾರೆ.

ಅಲ್ಲದೆ, ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾಃ... ಎಂದು ಶ್ಲೋಕವನ್ನು ಹೇಳಿರುವ ಅವರು, ಮಹಿಳೆಯನ್ನು ಮಂದಾಸನದ ಮೇಲೆ ಕೂರಿಸಿದಾಕ್ಷಣ ದೇವತೆಗಳು ಸಂತುಷ್ಟರಾಕ್ತಾರೆ. ಇಲ್ಲೂ ಕೂಡ ಕನ್ನಡಮ್ಮನ ದೇವಸ್ಥಾನದಲ್ಲಿ ಮಂದಾಸನದ ಮೇಲೆ ಕೂರಿಸಿ ಮಹಿಳೆಯನ್ನು ಹೇಗೆ ತುಳಿಯುತ್ತಾ ಇದ್ದೀರೋ, ದೌರ್ಜನ್ಯ ಮಾಡುತ್ತಿದ್ದೀರೋ, ಹಿಂಸೆ ಮಾಡುತ್ತೀದ್ದೀರೋ,..ಕನ್ನಡ ಭಾಷೆ ಮೇಲೆ ಕೂಡ ನೀವುಗಳು ದೌರ್ಜನ್ಯ ಮಾಡುತ್ತಿದ್ದೀರಿ.

Banu mushtaq
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: BJP-ಕಾಂಗ್ರೆಸ್ ಜಟಾಪಟಿ

ನೀವು ನನಗೆ ಉತ್ತರ ಕೊಡಬೇಕು. ಗೋಡೆಗೆ ಒತ್ತರಿಸಿ ಪ್ರಶ್ನೆ ಕೇಳುತ್ತಿದ್ದೇನೆ ನನಗೆ ಉತ್ತರ ಕೊಡಿ. ಕನ್ನಡವನ್ನು ಭುವನೇಶ್ವರಿಯಾಗಿ ಮಾಡಿ, ಕನ್ನಡದ ರಥವನ್ನು ಎಳೆದು. ಕನ್ನಡದ ಜಾತ್ರೆಯನ್ನು ಮಾಡಿ, ಕನ್ನಡ ಪರಿಷೆಯನ್ನು ಮಾಡಿ, ಏನು ಮಾಡಿದಿರಿ... ನನ್ನನ್ನು ಹೊರಗಟ್ಟಲು ಇಷ್ಟೊಂದು ಹುನ್ನಾರ ಬೇಕಿತ್ತಾ ನಿಮಗೆ..? ಎಂದು ಪ್ರಶ್ನಿಸಿರುವುದು ಕಂಡು ಬಂದಿದೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಬಾನು ಮುಷ್ತಾಕ್ ಅವರು, ಇದೀಗ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪುತ್ತಾರೆಯೇ ಎಂದು ಪ್ರಶ್ನಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com