
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಹೃದಯ ಭಾಗದಲ್ಲಿರುವ ಜೆ.ಸಿ ರಸ್ತೆಯಲ್ಲಿ ಕಳೆದ ಕೆಲ ತಿಂಗಳಿನಿಂದ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಇಲ್ಲಿ ಸಂಚರಿಸುವ ವಾಹನ ಸವಾರರು ಸಂಕಷ್ಟ ಎದುರಿಸುವಂತಾಗಿದೆ.
ಈ ನಡುವೆ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಆಗಸ್ಟ್ 30ರ ವರೆಗೆ ಈ ರಸ್ತೆಯಲ್ಲಿ ಭಾರಿ ಗಾತ್ರದ ವಾಹನಗಳು, ಬಸ್ ಇತ್ಯಾದಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಈ ಕುರಿತಾಗಿ ಬೆಂಗಳೂರು ಪಶ್ಚಿಮ ವಲಯ ಸಂಚಾರಿ ಪೊಲೀಸರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.
ವೈಟ್ ಟಾಪಿಂಗ್ ಕಾಮಗಾರಿ ಹಿನ್ನಲೆ ಜೆ.ಸಿ ರಸ್ತೆಯಲ್ಲಿ ಬಸ್ ಹಾಗೂ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿದ್ದು, ಜೊತೆಗೆ ಪರ್ಯಾಯ ಮಾರ್ಗಗಳನ್ನು ತಿಳಿಸಲಾಗಿದೆ.
ಪರ್ಯಾಯ ಮಾರ್ಗಗಳು ಇಂತಿದೆ...
ರಾಮಕೃಷ್ಣ ಆಶ್ರಮ, ಬುಲ್ ಟೆಂಪಲ್ ರಸ್ತೆ, ಚಾಮರಾಜ ಪೇಟೆ, ಗೂಡ್ಸ್ ಶೆಡ್ ರಸ್ತೆ ಮಾರ್ಗವಾಗಿ ಮೆಜೆಸ್ಟಿಕ್ ಕಡೆಗೆ ಸಂಚರಿಸುವುದು.
ಕಲಾಸಿಪಾಳ್ಯ ಬಸ್ ನಿಲ್ದಾಣದಿಂದ ಕೆ ಆರ್ ರಸ್ತೆ, ಲಾಲ್ ಬಾಗ್ ವೆಸ್ಟ್ ಗೇಟ್, ಅಶೋಕ ಪಿಲ್ಲರ್ ಸಿದ್ಧಾಪುರ ರಸ್ತೆ ಮಾರ್ಗವಾಗಿ ಹೊಸೂರು ರಸ್ತೆ ಸೇರುವುದು.
ಹೊಸೂರು ರಸ್ತೆಯಿಂದ ಡಬಲ್ ರಸ್ತೆ, ರಿಚ್ಮಂಡ್ ಸರ್ಕಲ್, ಹಡ್ಸನ್ ಸರ್ಕಲ್, ಕೆ.ಜಿ. ರಸ್ತೆ ಮಾರ್ಗವಾಗಿ ಮೆಜೆಸ್ಟಿಕ್ ಕಡೆಗೆ ಸಂಚರಿಸಬಹುದು.
Advertisement