
ಹಾಸನ: ಪ್ರಸಕ್ತ ಸಾಲಿನ ದಸರಾ ಉತ್ಸವವನ್ನು ಉದ್ಘಾಟಿಸಲು ರಾಜ್ಯ ಸರ್ಕಾರ ತಮ್ಮನ್ನು ಆಹ್ವಾನಿಸಿದ್ದನ್ನು ವಿರೋಧ ಪಕ್ಷಗಳು ಟೀಕಿಸುತ್ತಿರುವುದಕ್ಕೆ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಷಾಂತರ ಜನರು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಹೀಗಾಗಿ ಕೆಲವರ ವಿರೋಧ ಹಾಗೂ ಪ್ರತಿಕ್ರಿಯೆಗಳಿಗೆ ಉತ್ತರಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಆಕ್ಷೇಪ ವ್ಯಕ್ತಪಡಿಸಿರುವ ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿದ ಅವರು, ಯಾವ ವಿಷಯವನ್ನು ರಾಜಕೀಯ ರಾಜಕೀಯಗೊಳಿಸಬೇಕು. ರಾಜಕೀಯಗೊಳಿಸಬಾರದು ಎಂಬುದನ್ನು ತಿಳಿದುಕೊಳ್ಳಬೇಕೆಂದು ಹೇಳಿದ್ದಾರೆ.
ರಾಜಕಾರಣಿಗಳ ಒಂದು ಭಾಗವನ್ನು ತರಾಟೆಗೆ ತೆಗೆದುಕೊಂಡ ಅವರು, ಯಾವ ವಿಷಯವನ್ನು ರಾಜಕೀಯಗೊಳಿಸಬೇಕೆಂದು ಅವರು ತಿಳಿದುಕೊಳ್ಳಬೇಕು ಎಂದು ಹೇಳಿದರು.
ಆಕ್ಷೇಪ ವ್ಯಕ್ತಪಡಿಸುತ್ತಿರುವ ನಾಯಕರಿಗೆ ಬೂಕರ್ ಪ್ರಶಸ್ತಿಯ ಮಹತ್ವ ತಿಳಿದಿದ್ದರೆ ಸರ್ಕಾರದ ನಿರ್ಧಾರವನ್ನು ಟೀಕಿಸುತ್ತಿರಲಿಲ್ಲ, ಪ್ರಶಸ್ತಿ ಬಗ್ಗೆ ಸಡಿಲವಾಗಿ ಮಾತನಾಡುವವರಿಗೆ ನಾನು ಉತ್ತರಿಸಲು ಬಯಸುವುದಿಲ್ಲ ಎಂದು ತಿಳಿಸಿದರು.
2023 ರಲ್ಲಿ ಹಾವೇರಿಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಮಾನಾಂತರವಾದ ಜನ ಸಾಹಿತ್ಯ ಸಮ್ಮೇಳನದಲ್ಲಿ ಮಾಡಿದ ಭಾಷಣ ಕುರಿತು ಮಾತನಾಡಿ, ನನ್ನ ಭಾಷಣವನ್ನು ತಿರುಚಲಾಗಿದ್ದು, ನನ್ನ ವರ್ಚಸ್ಸಿಗೆ ಧಕ್ಕೆ ತರಲು ಸಾಮಾಜಿಕ ಜಾಲಜಾಣಗಳಲ್ಲಿ ತಿರುಚಿದ ವೀಡಿಯೋಗಳನ್ನು ಹಂಚಲಾಗಿದೆ. ಸಮ್ಮೇಳನದಲ್ಲಿ ನಾನು ಮುಸ್ಲಿಮರು, ದಲಿತರು, ಮಹಿಳೆಯರು ಮತ್ತು ದೀನದಲಿತ ಬರಹಗಾರರ ನಿರ್ಲಕ್ಷ್ಯದ ಬಗ್ಗೆ ನಾನು ಮಾತನಾಡಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅವರ ಪ್ರತಿಕ್ರಿಯೆಯನ್ನು ಶ್ಲಾಘಿಸಿದ ಅವರು. ಇಂತಹ ನಾಯಕರ ಸಂಖ್ಯೆ ಹೆಚ್ಚಾಗಬೇಕು ಎಂದರು.
Advertisement