Banu Mushtaq and Prathap Simha
ಬಾನು ಮುಷ್ತಾಕ್ , ಸಂಸದ ಪ್ರತಾಪ್ ಸಿಂಹ ಸಾಂದರ್ಭಿಕ ಚಿತ್ರ

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಮುಸ್ಲಿಂ ಅನ್ನುವ ಕಾರಣಕ್ಕೆ ನಾನು ವಿರೋಧಿಸುತ್ತಿಲ್ಲ.
Published on

ಮೈಸೂರು: ಈ ಬಾರಿಯ ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಆಯ್ಕೆ ಕುರಿತು ಬಿಜೆಪಿ ನಾಯಕರ ಟೀಕೆ ಮುಂದುವರೆದಿದೆ. ಅದರಲ್ಲೂ ಮಾಜಿ ಸಂಸದ ಪ್ರತಾಪ್ ಸಿಂಹ, ಈ ವಿಚಾರದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಜನ ಸಾಹಿತ್ಯ ಭಾಷಣದಲ್ಲಿ ನಿಮ್ಮ ಭಾಷಣ ಏನಿತ್ತು? ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಮುಸ್ಲಿಂ ಅನ್ನುವ ಕಾರಣಕ್ಕೆ ನಾನು ವಿರೋಧಿಸುತ್ತಿಲ್ಲ. ಟಿಪ್ಪು ಜಯಂತಿ ಮಾಡಿ ಎಂದು ಮುಸ್ಲಿಮರು ಕೇಳಿರಲಿಲ್ಲ. ಸಿದ್ದರಾಮಯ್ಯ ಮುಸ್ಲಿಮರ ಓಲೈಕೆಗಾಗಿ ಟಿಪ್ಪು ಜಯಂತಿ ಮಾಡಿದರು. ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟನೆಗೆ ಕರೆಯಿರಿ ಎಂದು ಯಾವ ಮುಸ್ಲಿಮರು ಕೇಳಿರಲಿಲ್ಲ. ಅದರೂ ಸಿದ್ದರಾಮಯ್ಯ ಮಾಡಿದರು. ಬಾನು ಮುಷ್ತಾಕ್ ಅವರಿಗೆ ನೇರವಾಗಿ ಪ್ರಶ್ನೆ ಕೇಳ್ತೀನಿ. ಜನ ಸಾಹಿತ್ಯ ಭಾಷಣದಲ್ಲಿ ನಿಮ್ಮ ಭಾಷಣ ಏನಿತ್ತು? ಎಂದು ಪ್ರಶ್ನಿಸಿದ್ದಾರೆ.

ನಾಡದೇವಿ ರೂಪದಲ್ಲಿನ ಚಾಮುಂಡಿಯನ್ನು ಒಪ್ಪುತ್ತಾರಾ?

ಮುಸ್ಲಿಮರು ಕನ್ನಡ ಕಲಿಯಲು ಭುವನೇಶ್ವರಿ ತಾಯಿ ಮೂರ್ತಿ ಅಡ್ಡಿಯಾಯಿತು ಎಂದು ಅವರು ಹೇಳಿದ್ದಾರೆ. ಭುವನೇಶ್ವರಿಗೆ ಅರಿಶಿನ, ಕುಂಕುಮ ಇಟ್ಟಿದ್ದರಿಂದ ಮುಸ್ಲಿಮರು ಕನ್ನಡ ಕಲಿಯಲು ಆಗಿಲ್ಲ ಎಂದು ಮುಷ್ತಾಕ್ ಹೇಳಿದ್ದು ಸತ್ಯ ತಾನೆ? ಕನ್ನಡವನ್ನು ಭುವನೇಶ್ವರಿ ಆಗಿ ಒಪ್ಪದ ಬಾನು ಮುಷ್ತಾಕ್, ನಾಡದೇವಿ ರೂಪದಲ್ಲಿನ ಚಾಮುಂಡಿಯನ್ನು ಒಪ್ಪುತ್ತಾರಾ? ಅರಿಶಿನ, ಕುಂಕುಮ ಬಗ್ಗೆ ಯಾಕೆ ಬಾನು ಮುಷ್ತಾಕ್‌ಗೆ ತಕರಾರು, ಕಿರಿಕಿರಿ ಇದೆ? ಹಿಂದೂಗಳ ಮನೆಗೆ ಯಾರೇ ಸುಮಂಗಲಿ ಹೋದರೂ ಕುಂಕುಮ ಕೊಡುತ್ತಾರೆ. ದೇವಸ್ಥಾನಕ್ಕೆ ಹೋದರೆ ಕುಂಕುಮ ಪ್ರಸಾದವಾಗಿ ಕೊಡುತ್ತಾರೆ. ಇಂತಹ ಕುಂಕುಮವೇ ಬಾನು ಮುಷ್ತಾಕ್‌ಗೆ ಕಿರಿಕಿರಿ ಉಂಟು ಮಾಡಿದೆ. ಅರಿಶಿನ ಕುಂಕುಮ ಬಗ್ಗೆ ಅವರಿಗೆ ದ್ವೇಷದ ಭಾವನೆ ಇದೆ ಎಂದು ವಾಗ್ದಾಳಿ ನಡೆಸಿದರು.

ಅಲ್ಲಾ ನಿಮ್ಮನ್ನು ಮಸೀದಿಗೆ ಕರೆಸಿಕೊಳ್ಳುವುದಿಲ್ಲ: ನೀವು ನಂಬಿರುವ ನಿಮ್ಮ ಅಲ್ಲಾ ನಿಮ್ಮನ್ನು ಮಸೀದಿಗೆ ಕರೆಸಿಕೊಳ್ಳುವುದಿಲ್ಲ. ನಮ್ಮ ದೇವರು ಹೇಗೆ ಕರೆಸಿ ಕೊಳ್ಳುತ್ತಾರೆ? ತಮಿಳುನಾಡಿನಲ್ಲಿ ಮುಸ್ಲಿಮರಿಗೆ ಮಾತೃ ಭಾಷೆ ತಮಿಳು. ಕರ್ನಾಟಕದಲ್ಲಿ ಯಾಕೆ ಮುಸ್ಲಿಮರಿಗೆ ಮಾತೃ ಭಾಷೆ ಕನ್ನಡ ಆಗಲ್ಲ? ತಲೆ ಮಾಸಿದ ಕಾಂಗ್ರೆಸ್ ನಾಯಕರು ನನಗೂ ಪ್ರಶ್ನೆ ಮಾಡಿದ್ದಾರೆ. ಇಸ್ಲಾಂ, ಕಿಶ್ಚಿಯನ್ ಅಕ್ರಮಣಕಾರಿ ಆಗಿ ಭಾರತಕ್ಕೆ ಬಂದವರು. ನಮ್ಮ ಆಚಾರ, ವಿಚಾರ, ಸಂಸ್ಕೃತಿ ಒಡೆದು ಹಾಕಲು ಘಜ್ನಿ, ಮೊಗಲರು ಯತ್ನಿಸಿದರು. ಇದೇ ರೀತಿ ನಮ್ಮ ನಂಬಿಕೆಯನ್ನು ಸಾಹಿತಿ ಬಾನು ಮುಷ್ತಾಕ್ ಒಡೆಯುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಇದೇ ವೇಳೆ ಬಾನು ಮುಷ್ತಾಕ್ ಆಯ್ಕೆ ಸ್ವಾಗತಿಸಿದ ಸಂಸದ ಯದುವೀರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ಬಿಜೆಪಿ ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರು ಏನೂ ಮಾತಾಡ್ತಾರಾ ಅದೇ ನಮ್ಮ ಮಾತು. ಅದೇ ನಮ್ಮ ನಿಲುವು. ನಮ್ಮ ಪಕ್ಷದ ನಿಲುವನ್ನೇ ನಾನು ಮಾತಾಡಿದ್ದೇನೆ. ಮೈಸೂರಿಗರಿಗೆ ಒಂದು ಪ್ರಶ್ನೆ ಕೇಳ್ತೀನಿ. ಭುವನೇಶ್ವರಿ ಬಗ್ಗೆ ಅವಮಾನಕಾರಿಯಾಗಿ ಮಾತಾಡಿದ ಬಾನು ಮುಷ್ತಾಕ್ ದಸರಾ ಉದ್ಘಾಟಿಸಬೇಕಾ? ಜನರೇ ಹೇಳಲಿ ಎಂದರು.

Banu Mushtaq and Prathap Simha
ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ; ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ನಮಗೆ ಧರ್ಮದ ಪಾಠ ಬೇಡ: ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ಶಿವನ ಕಾಪಲಿ ಬೆಟ್ಟವನ್ನೇ ಯೇಸು ಬೆಟ್ಟ ಮಾಡಲು ಹೊರಟ ಡಿಕೆ ಶಿವಕುಮಾರ್ ಅವರಿಂದ ನಮಗೆ ಧರ್ಮದ ಪಾಠ ಬೇಡ. ಅನ್ಯ ಧರ್ಮದವರ ಓಲೈಕೆಗಾಗಿ ಬ್ರದರ್ಸ್ ಕರೆಯುವ ಅವರು ಧರ್ಮದ ಬಗ್ಗೆ ತಿಳಿವಳಿಕೆ ಹೇಳುವುದು ಬೇಡ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com