ಬಾಗಲಕೋಟೆಯ ಮನೆ ಹೊರಗಡೆ ಚಡ್ಡಿ ಗ್ಯಾಂಗ್ :  ಅಮೆರಿಕದಲ್ಲಿ ಕುಳಿತು ಮುಧೋಳದ ಮನೆ ಕಳ್ಳತನ ತಪ್ಪಿಸಿದ ಟೆಕ್ಕಿ ಪುತ್ರಿ!

ಬಾಗಲಕೋಟೆಯ ಮನೆ ಹೊರಗಡೆ ಚಡ್ಡಿ ಗ್ಯಾಂಗ್ : ಅಮೆರಿಕದಲ್ಲಿ ಕುಳಿತು ಮುಧೋಳದ ಮನೆ ಕಳ್ಳತನ ತಪ್ಪಿಸಿದ ಟೆಕ್ಕಿ ಪುತ್ರಿ!

ಮುಧೋಳ ನಗರದ ಸಿದ್ರಾಮೇಶ್ವರ ಕಾಲೋನಿಯಲ್ಲಿ ನೆಲೆಸಿರುವ ನಿವೃತ್ತ ಎಂಜಿನಿಯರ್‌ ಹನಮಂತಗೌಡ ಅವರ ಪುತ್ರಿ ಶೃತಿ ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ.
Published on

ಬಾಗಲಕೋಟೆ: ಟೆಕ್ಕಿ ಯುವತಿಯೊಬ್ಬರು ಅಮೆರಿಕದಲ್ಲಿ ಕುಳಿತೇ ತನ್ನ ಮನೆಯಲ್ಲಿ ನಡೆಯಬಹುದಾದ ಕಳ್ಳತನವನ್ನು ತಪ್ಪಿಸಿದ್ದಾರೆ.

ಮುಧೋಳ ನಗರದ ಸಿದ್ರಾಮೇಶ್ವರ ಕಾಲೋನಿಯಲ್ಲಿ ನೆಲೆಸಿರುವ ನಿವೃತ್ತ ಎಂಜಿನಿಯರ್‌ ಹನಮಂತಗೌಡ ಅವರ ಪುತ್ರಿ ಶೃತಿ ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ. ವಿದೇಶದಲ್ಲಿದ್ದರೂ ಸಮಯಪ್ರಜ್ಞೆ ಮೆರೆಯುವ ಮೂಲಕ ಮನೆಗೆ ನುಗ್ಗಿದ್ದ ಕಳ್ಳರನ್ನು ಓಡಿಸುವಲ್ಲಿ ಶೃತಿ ಯಶಸ್ವಿಯಾಗಿದ್ದಾರೆ.

ಕೆಲ ವರ್ಷಗಳ ಹಿಂದೆ ಸ್ವದೇಶ ಆಗಮಿಸಿದ್ದಾಗ ಶೃತಿ ಮನೆಗೆ ಸಿಸಿ ಕ್ಯಾಮೆರಾ ಅಳವಡಿಸಿದ್ದರು. ಅಳವಡಿಸಿದ್ದು ಮಾತ್ರವಲ್ಲ ಅದರ ದೃಶ್ಯ ತನ್ನ ಮೊಬೈಲಿಗೆ ಬರುವಂತೆ ಸಿಂಕ್‌ ಮಾಡಿದ್ದರು. ಮಂಗಳವಾರ ತಡರಾತ್ರಿ 1 ರಿಂದ 2 ಗಂಟೆಯ ಮಧ್ಯೆ ಚಡ್ಡಿ ಗ್ಯಾಂಗ್ ಇಬ್ಬರು ಹನಮಂತಗೌಡ ಸಂಕಪ್ಪನವರ್ ಮನೆಗೆ ನುಗ್ಗಿದ್ದಾರೆ.

ಮನೆಗೆ ಸಿಸಿಟಿವಿ ಕ್ಯಾಮರಾ ಹಾಕಿಸಿದ್ದಾರೆ. ಹನುಮಂತಗೌಡರ ಅಮೆರಿಕದಲ್ಲಿರುವ ಪುತ್ರಿ ಶ್ರುತಿ ತನ್ನ ಮೊಬೈಲ್​​ಗೆ ಸಿಸಿ ಕ್ಯಾಮರಾ ಕನೆಕ್ಟ್​ ಮಾಡಿಕೊಂದ್ದು, ಅಲ್ಲಿಂದಲೇ ಮನೆಯವರನ್ನು ಗಮನಿಸುತ್ತಿದ್ದರು ಮುಧೋಳದಲ್ಲಿ ಮಧ್ಯರಾತ್ರಿ ಆಗಿದ್ದರೆ ಅಮೆರಿಕದಲ್ಲಿ ಮಧಾಹ್ನದ 3:30ರ ಸಮಯವದು. ಹೀಗೆ ಮೊಬೈಲ್‌ ನೋಡುತ್ತಿದ್ದಾಗ ಮನೆಗೆ ಕಳ್ಳರು ನುಗ್ಗಿದ ದೃಶ್ಯವನ್ನು ನೋಡಿ ಕೂಡಲೇ ಶೃತಿ ಪೋಷಕರಿಗೆ ಕರೆ ಮಾಡಿದ್ದಾರೆ.

ಬಾಗಲಕೋಟೆಯ ಮನೆ ಹೊರಗಡೆ ಚಡ್ಡಿ ಗ್ಯಾಂಗ್ :  ಅಮೆರಿಕದಲ್ಲಿ ಕುಳಿತು ಮುಧೋಳದ ಮನೆ ಕಳ್ಳತನ ತಪ್ಪಿಸಿದ ಟೆಕ್ಕಿ ಪುತ್ರಿ!
2024ರಲ್ಲಿ ಬೆಂಗಳೂರಿನಲ್ಲಿ ಮನೆ ಕಳ್ಳತನ ಪ್ರಕರಣ ಶೇ.20ರಷ್ಟು ಹೆಚ್ಚಳ: ಪೊಲೀಸರಿಗೆ ಸವಾಲು

ತಕ್ಷಣ ಎಚ್ಚೆತ್ತ ಪೋಷಕರು ಬಾಗಿಲು ತೆರೆಯದೇ ಮನೆಯ ಎಲ್ಲಾ ದೀಪ ಆನ್‌ ಮಾಡಿ ಕೂಗಾಡಿದ್ದಾರೆ. ದಿಢೀರ್‌ ಮನೆಯ ಲೈಟ್‌ ಆನ್‌ ಆಗಿದ್ದನ್ನು ಕಂಡು ಕಳ್ಳರು ಶಾಕ್‌ಗೆ ಒಳಗಾಗಿ ಸ್ಥಳದಿಂದ ಪರಾರಿಯಾಗಿದ್ದಾರೆ. ಎಚ್ಚೆತ್ತ ಹನುಮಂತಗೌಡ, ಮನೆ ಬಾಗಿಲು ತೆರೆದಾಗ ಚಡ್ಡಿ ಗ್ಯಾಂಗ್ ಅಲ್ಲಿಂದ ಕಾಲ್ಕಿತ್ತಿದೆ.

ಒಬ್ಬನ ಮುಖಕ್ಕೆ ಮಂಕಿ ಕ್ಯಾಪ್, ಮತ್ತೊಬ್ಬನ ಮುಖದಲ್ಲಿ ಮಾಸ್ಕ್, ಮೈಮೇಲೆ ಶರ್ಟ್ ಇದೆ ಆದರೆ ಪ್ಯಾಂಟೇ ಇಲ್ಲ. ಇರೋದು ಬರೀ ಚಡ್ಡಿ ಧರಿಸಿದ್ದರು. ಸದ್ಯ, ಅಮೆರಿಕದಲ್ಲಿ ನೆಲೆಸಿದ್ದ ಸಾಫ್ಟ್​ವೇರ್ ಎಂಜಿನಿಯರ್​ ಶ್ರುತಿ ಸಮಯಪ್ರಜ್ಞೆಯಿಂದ ಮನೆ ಕಳ್ಳತನ ತಪ್ಪಿದೆ.

ಇದೀಗ ಚಡ್ಡಿ ಗ್ಯಾಂಗ್ ಬಗ್ಗೆ ಕೇಸ್​ ದಾಖಲಿಸಿಕೊಂಡಿರುವ ಮುಧೋಳ ಪೊಲೀಸರು, ತನಿಖೆ ಆರಂಭಿಸಿದ್ದಾರೆ. ಒಟ್ಟಿನಲ್ಲಿ ಮುಧೋಳ ಕಳ್ಳತನ ಪ್ರಕರಣ ಅಮೆರಿಕದಿಂದ ಬಯಲಾಗಿದ್ದು, ಪೊಲೀಸರು ಚಡ್ಡಿ ಗ್ಯಾಂಗ್ ಅನ್ನು ಆದಷ್ಟು ಬೇಗ ಹಿಡಿದು, ಮುಂದೆ ಆಗಬಹುದಾದ ಇನ್ನಷ್ಟು ಕಳ್ಳತನ ಪ್ರಕರಣಗಳನ್ನು ತಡೆಯಬೇಕಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com