
ದಾವಣಗೆರೆ: ಮಟ್ಟಿಕಲ್‌ನ ಗಣೇಶಮೂರ್ತಿ ಪ್ರತಿಷ್ಠಾಪನಾ ಸ್ಥಳದಲ್ಲಿ ಅಳವಡಿಸಿದ್ದ ಆಕ್ಷೇಪಾರ್ಹ ಫ್ಲೆಕ್ಸ್‌ನ್ನು ಪೊಲೀಸರು ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುರುವಾರ ರಾತ್ರಿ ನಿರ್ಮಾಣವಾಗಿದ್ದ ಬಿಗುವಿನ ವಾತಾವರಣ ಶುಕ್ರವಾರ ಬೆಳಿಗ್ಗೆ ತಿಳಿಗೊಂಡಿದೆ.
ಶಿವಾಜಿ ಮಹಾರಾಜ್ ಹಾಗೂ ಅಫ್ಜಲ್ ಖಾನ್ ನಡುವಿನ ಯುದ್ಧದ ಸನ್ನಿವೇಶದ ಆಕ್ಷೇಪಾರ್ಹ ಫ್ಲೆಕ್ಸ್ ತೆರವುಗೊಂಡಿದ್ದು, ಈ ಸ್ಥಳದಲ್ಲಿ ಶಿವಾಜಿಯ ಬೃಹತ್ ಚಿತ್ರವನ್ನು ಅಳವಡಿಸಲಾಗಿದೆ.
ನಗರದ ವೀರ ಸಾವರ್ಕರ್ ಯುವಕರ ಸಂಘ ಮಟ್ಟಿಕಲ್‌ನಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ಮೂರ್ತಿಯ ಪೆಂಡಾಲ್ ಬಳಿ ಇತಿಹಾಸದ ಮಹನೀಯರ ಬೃಹತ್ ಗಾತ್ರದ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ಶಿವಾಜಿ ಹಾಗೂ ಅಫ್ಜಲ್ ಖಾನ್ ನಡುವಿನ ಯುದ್ಧದ ಸನ್ನಿವೇಶದ ಫ್ಲೆಕ್ಸ್‌ಗೆ ಆಕ್ಷೇಪ ವ್ಯಕ್ತಪಡಿಸಿದ ಕೆಲವರು, ಕೋಮುಭಾವನೆ ಕೆರಳಿಸುತ್ತಿದೆ ಎಂದು ಪೊಲೀಸರಿಗೆ ದೂರು ನೀಡಿದ್ದರು.
ರಾತ್ರಿ ಸ್ಥಳಕ್ಕೆ ಧಾವಿಸಿದ ಪೊಲೀಸರು, ಆಕ್ಷೇಪಾರ್ಹ ಚಿತ್ರ ತೆರವುಗೊಳಿಸುವಂತೆ ಗಣೇಶ ಉತ್ಸವ ಸಮಿತಿಗೆ ಸೂಚಿಸಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ನೂರಾರು ಯುವಕರು, ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದರು. ಇದರಿಂದ ಗುರುವಾರ ಮಧ್ಯರಾತ್ರಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸಂಘಪರಿವಾರ ಸಂಘಟನೆಯ ಮುಖಂಡರೊಂದಿಗೆ ಸುಧೀರ್ಘ ಚರ್ಚೆ ನಡೆಸಿದ ಪೊಲೀಸರು ವಾತಾವರಣ ತಿಳಿಸಿದರು.
ಯುವಕರಿಗೆ ಇತಿಹಾಸ ತಿಳಿಸುವ ಕೆಲಸ ಪ್ರತಿ ವರ್ಷ ಮಾಡುತ್ತೇವೆ ವಿನಃ ಯಾವುದೇ ಕೋಮು ಪ್ರಚೋದನೆ ಮಾಡೋದಿಲ್ಲ ಎಂದು ಹೇಳಿದರೂ ಪೊಲೀಸರು ತೆರವು ಮಾಡಲು ಮುಂದಾಗಿದ್ದರು. ಆಗ ಪೊಲೀಸರ ಹಾಗೂ ಹಿಂದೂ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿತ್ತು. ಕೊನೆಗೆ ಪೊಲೀಸರು ಫ್ಲೆಕ್ಸ್‌ನ್ನು ಪೊಲೀಸರು ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
Advertisement