
ಬೆಳಗಾವಿ: ಪರಾರಿಯಾಗಲು ಯತ್ನಿಸಿದ ದರೋಡೆ, ಸಾಮೂಹಿಕ ಅತ್ಯಾಚಾರ ಮತ್ತು ಸುಲಿಗೆ ಸೇರಿದಂತೆ ಹಲವಾರು ಗಂಭೀರ ಅಪರಾಧಗಳಲ್ಲಿ ಭಾಗಿಯಾಗಿರುವ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಗಾಯಗೊಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಹೊರವಲಯದಲ್ಲಿ ರಮೇಶ್ ಕಿಲ್ಲಾರ್ ಕಾಲಿಗೆ ಕಿತ್ತೂರು ಠಾಣೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಬಂಧಿಸಲು ತೆರಳಿದ್ದ ಕಾನ್ ಸ್ಟೇಬಲ್ ಷರೀಫ್ ಗೆ ಚಾಕು ಇರಿದು ರಮೇಶ್ ಪರಾರಿಯಾಗಲು ಯತ್ನಿಸಿದ್ದ.
ಆತ್ಮ ರಕ್ಷಣೆಗಾಗಿ ಪಿಎಸ್ಐ ಪ್ರವೀಣ್ ಗಂಗೊಳ್ಳಿ ಅವರು ರಮೇಶ್ ಮೇಲೆ ಫೈರಿಂಗ್ ನಡೆಸಿದ್ದಾರೆ ಗಾಯಗೊಂಡ ಆರೋಪಿ ರಮೇಶ್ ಗೆ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ದರೋಡೆ ಸಾಮೂಹಿಕ ಅತ್ಯಾಚಾರ ಸೇರಿದಂತೆ ಅಕ್ರಮ ಶಸ್ತ್ರಾಸ್ತ್ರ ಸೇರಿದಂತೆ ಹಲವು ಪ್ರಕರಣಗಳಲ್ಲಿ ರಮೇಶ್ ಕಿಲ್ಲರ್ ಭಾಗಿಯಾಗಿದ್ದ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಗಾಯಗೊಂಡ ಆರೋಪಿ ಹಾಗೂ ಪೊಲೀಸರನ್ನು ಚಿಕಿತ್ಸೆಗಾಗಿ ಬೆಳಗಾವಿಯ ಬಿಐಎಂಎಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಘಟನೆ ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Advertisement