ಬೆಂಗಳೂರು ಕಾಲ್ತುಳಿತ: ಮೃತಪಟ್ಟವರ ಪ್ರತಿ ಕುಟುಂಬಕ್ಕೆ 25 ಲಕ್ಷ ರೂ ನೆರವು ನೀಡಿದ RCB; ಅಭಿಮಾನಿಗಳ ಮೆಚ್ಚುಗೆ

ಜೂನ್ 4, 2025 ರಂದು ನಡೆದ ಕಾಲ್ತುಳಿತದಿಂದಾಗಿ 11 ಮಂದಿ ಅಭಿಮಾನಿಗಳು ಸಾವಿಗೀಡಾಗಿದ್ದರು.
Chinnaswamy Stadium
ಕಾಲ್ತುಳಿತ ಸಂಭವಿಸಿದ ಚಿನ್ನಸ್ವಾಮಿ ಕ್ರೀಡಾಂಗಣ ಬಳಿಯ ಗೇಟ್ ಮುಂಭಾಗದ ಚಿತ್ರ
Updated on

ಬೆಂಗಳೂರು: ಆರ್​ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಿಂದ ಮೃತಪಟ್ಟ ಪ್ರತಿ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಆರ್ಥಿಕ ಸಹಾಯ ನೀಡಿರುವುದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಅಧಿಕೃತವಾಗಿ ಪ್ರಕಟಿಸಿದೆ.

ಜೂನ್ 4, 2025 ರಂದು ನಡೆದ ಕಾಲ್ತುಳಿತದಿಂದಾಗಿ 11 ಮಂದಿ ಅಭಿಮಾನಿಗಳು ಸಾವಿಗೀಡಾಗಿದ್ದರು. ಅಭಿಮಾನಿಗಳ ಸಾವಿನ ಬೆನ್ನಲ್ಲೇ ಆರ್​ಸಿಬಿ ಕೇರ್ಸ್ ಶುರು ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಇದೀಗ ಮೃತಪಟ್ಟ ಕುಟುಂಬಗಳಿಗೆ ಧನ ಸಹಾಯ ನೀಡಿದೆ.

ಅಲ್ಲದೆ ಆರ್​ಸಿಬಿ ಕೇರ್ಸ್ ಮೂಲಕ ಮತ್ತಷ್ಟು ಸಹಾಯಹಸ್ತ ನೀಡುವ ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸುವ ಭರವಸೆಯನ್ನು ಸಹ ನೀಡಿದ್ದಾರೆ.

ಆರ್​ಸಿಬಿ ಕೇರ್ಸ್​ನ ಅಧಿಕೃತ ಪ್ರಕಟಣೆ ಹೀಗಿದೆ:

ಜನವರಿ 4, 2025 – ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ.

ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ… ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು, ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ನಗರ, ಸಮುದಾಯ ಮತ್ತು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ.

ಅವರ ಜಾಗವನ್ನು ಯಾವ ಸಹಾಯವೂ ತುಂಬಲಾರದು. ಆದರೆ ಮೊದಲನೇ ಮತ್ತು ಗೌರವದ ಸಂಕೇತವಾಗಿ, ಆರ್​ಸಿಬಿ ಪ್ರತಿ ಕುಟುಂಬಕ್ಕೆ 25 ಲಕ್ಷ ರೂ. ನೆರವನ್ನು ನೀಡಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ, ಕರುಣೆ, ಒಗಟ್ಟು ಮತ್ತು ನಿರಂತರ ಕಾಳಜಿಯ ಭರವಸೆ.

ಇದು ಆರ್​ಸಿಬಿ ಕೇರ್ಸ್​ನ ಆರಂಭವೂ ಹೌದು. ಅವರ ನೆನಪನ್ನು ಗೌರವಿಸುವ ಮೂಲಕ ಶುರುವಾದ ಈ ಪ್ರಯತ್ನ, ಅಭಿಮಾನಿಗಳ ಭಾವನೆ, ನಂಬಿಕೆ ಮತ್ತು ಸುರಕ್ಷತೆ ಪ್ರತಿಬಿಂಬಿಸುವ ದೀರ್ಘಕಾಲದ ಬದ್ಧತೆಯಾಗಿದೆ. ಆರ್​ಸಿಬಿ ಕೇರ್ಸ್​ ಕುರಿತು ಇನ್ನಷ್ಟು ವಿವರಗಳು ಶೀಘ್ರದಲ್ಲೇ..ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದೆ.

ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಕಾಳಜಿಗೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಆರ್​ಸಿಬಿ ಕೇರ್ಸ್​ನ ನಡೆಯನ್ನು ಸ್ವಾಗತಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com