Belagavi: 15 ವರ್ಷದ ಅಪ್ರಾಪ್ತ ಬಾಲಕಿ ಜೊತೆ ಮದುವೆ; ಗ್ರಾಮ ಪಂಚಾಯಿತಿ ಅಧ್ಯಕ್ಷನ ವಿರುದ್ಧ POCSO ಪ್ರಕರಣ ದಾಖಲು!

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬಸ್ಸಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಭೀಮಶಿ ಕಾಳಿಮನಿ ಎಂಬಾತನ ವಿರುದ್ಧ 15 ವರ್ಷದ ಬಾಲಕಿಯನ್ನು ವಿವಾಹವಾದ ಆರೋಪ ಹೊರಿಸಲಾಗಿದೆ.
Gram Panchayat president accused of marrying 15-year-old girl
ಬಾಲ್ಯ ವಿವಾಹ-ಪೋಕ್ಸೋ ಪ್ರಕರಣ ದಾಖಲು
Updated on

ಬೆಳಗಾವಿ: 15 ವರ್ಷದ ಅಪ್ರಾಪ್ತ ಬಾಲಕಿ ಜೊತೆ ಮದುವೆಯಾದ ಆರೋಪದ ಮೇರೆಗೆ ಬೆಳಗಾವಿ ಗ್ರಾಮ ಪಂಚಾಯಿತಿ ಅಧ್ಯಕ್ಷನ ವಿರುದ್ಧ POCSO ಪ್ರಕರಣ ದಾಖಲಾಗಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬಸ್ಸಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಭೀಮಶಿ ಕಾಳಿಮನಿ ಎಂಬಾತನ ವಿರುದ್ಧ 15 ವರ್ಷದ ಬಾಲಕಿಯನ್ನು ವಿವಾಹವಾದ ಆರೋಪ ಹೊರಿಸಲಾಗಿದೆ. ನವೆಂಬರ್ 2023 ರಲ್ಲಿ ನಡೆದ ಈ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿತ್ತು.

ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ, ಕಾಳಿಮಣಿ ನವೆಂಬರ್ 5, 2023 ರಂದು ಅಪ್ರಾಪ್ತ ಬಾಲಕಿಯನ್ನು ವಿವಾಹವಾಗಿದ್ದ. ಈಗ್ಗೆ ಹುಡುಗಿ ಐದು ತಿಂಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ವರದಿಯಾಗಿದೆ. ಆರೋಪಗಳು ದೃಢಪಟ್ಟ ನಂತರ, ಪೊಲೀಸರು ಕಾಳಿಮಣಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಮಕ್ಕಳ ಹಕ್ಕುಗಳ ಆಯೋಗವು ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗೆ ಎಫ್‌ಐಆರ್ ದಾಖಲಿಸಿ ಹುಡುಗಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಂತೆ ನಿರ್ದೇಶಿಸಿತ್ತು. ಜಿಲ್ಲಾಧಿಕಾರಿ, ಮಕ್ಕಳ ರಕ್ಷಣಾ ಅಧಿಕಾರಿಗಳು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಈ ಸೂಚನೆಗಳನ್ನು ನೀಡಲಾಗಿದ್ದರೂ, ಇಲ್ಲಿಯವರೆಗೆ ಯಾವುದೇ ಮಹತ್ವದ ಕ್ರಮ ಕೈಗೊಂಡಿಲ್ಲ ಎಂದು ಹೇಳಲಾಗಿದೆ.

Gram Panchayat president accused of marrying 15-year-old girl
ಬೆಂಗಳೂರು: ಪ್ರಯಾಣಿಕನಿಗೆ ಕಪಾಳಮೋಕ್ಷ ಮಾಡಿದ BMTC ಬಸ್ ಕಂಡೆಕ್ಟರ್; ನೆಟ್ಟಿಗರು ಆಕ್ರೋಶ, Video!

ಬಂಧನ ತಪ್ಪಿಸಿಕೊಳ್ಳಲು ಮಂತ್ರಿಗಳ ಹೆಸರು ಉಲ್ಲೇಖ

ಇದೇ ವೇಳೆ ಆರೋಪಿ ಕಾಳಿಮಣಿ ಬಂಧನದಿಂದ ತಪ್ಪಿಸಿಕೊಳ್ಳಲು ಇಬ್ಬರು ಕ್ಯಾಬಿನೆಟ್ ಸಚಿವರ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾನೆ ಎಂಬ ಆರೋಪಗಳು ಕೇಳಿಬಂದಿವೆ. ಪೊಲೀಸ್ ಕ್ರಮಕ್ಕೆ ಹೆದರಿ ಆತ ತಲೆಮರೆಸಿಕೊಂಡಿದ್ದ. ದೂರಿನ ನಂತರ ಮಕ್ಕಳ ರಕ್ಷಣಾ ತಂಡಗಳು ಬಸ್ಸಾಪುರ ಗ್ರಾಮಕ್ಕೆ ನಾಲ್ಕು ಬಾರಿ ಭೇಟಿ ನೀಡಿದರೂ ಆತನನ್ನು ಬಂಧಿಸುವಲ್ಲಿ ವಿಫಲವಾಗಿವೆ ಎಂದು ಮೂಲಗಳು ತಿಳಿಸಿವೆ.

ಬೆಳಗಾವಿಯ ಪ್ರಸಿದ್ಧ ಮಹಿಳಾ ಕಾರ್ಯಕರ್ತೆಯೊಬ್ಬರು ಆರೋಪಿಯನ್ನು ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಸೇರಿದವನಾಗಿರುವುದರಿಂದ ಆತನನ್ನು ಯಾವುದೇ ಶಿಕ್ಷೆಯಿಲ್ಲದೆ ಬಿಡಲಾಗಿದೆ ಎಂದು ಆರೋಪಿಸಿದ್ದಾರೆ. ಆತ ಮಾಡಿದ ಗಂಭೀರ ಅಪರಾಧದ ಬಗ್ಗೆ ತಿಳಿದಿದ್ದರೂ ಜಿಲ್ಲೆಯ ಯಾವ ನಾಯಕರು ಆತನನ್ನು ರಕ್ಷಿಸುತ್ತಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com