ಬೆಂಗಳೂರು: ಪ್ರಯಾಣಿಕನಿಗೆ ಕಪಾಳಮೋಕ್ಷ ಮಾಡಿದ BMTC ಬಸ್ ಕಂಡಕ್ಟರ್; ನೆಟ್ಟಿಗರು ಆಕ್ರೋಶ, Video!

ದೇವನಹಳ್ಳಿಯಿಂದ ಮೆಜೆಸ್ಟಿಕ್‌ಗೆ ಈಶಾನ್ಯ ಭಾರತದ ಮೂಲದ ಯುವಕ ಟಿಕೆಟ್ ಪಡೆಯದೇ ಪ್ರಯಾಣಿಸುತ್ತಿದ್ದನು. ಇನ್ನು ಟಿಕೆಟ್ ತಪಾಸಣೆ ತಂಡ ಬಸ್ ನಿಲ್ಲಿಸಿ ಪ್ರಯಾಣಿಕರ ಟಿಕೆಟ್ ಪರಿಶೀಲಿಸಿದ್ದಾರೆ.
ಪ್ರಯಾಣಿಕನಿಗೆ ಕಂಡಕ್ಟರ್ ಕಪಾಳಮೋಕ್ಷ
ಪ್ರಯಾಣಿಕನಿಗೆ ಕಂಡಕ್ಟರ್ ಕಪಾಳಮೋಕ್ಷ
Updated on

ಬೆಂಗಳೂರು: ಟಿಕೆಟ್ ಪಡೆಯದೇ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಕಂಡಕ್ಟರ್ ಕಪಾಳಮೋಕ್ಷ ಮಾಡಿದ ವಿಡಿಯೋ ವೈರಲ್ ಆಗಿದೆ. ಬಿಎಂಟಿಸಿ ಬಸ್ನಲ್ಲಿ ದೇವನಹಳ್ಳಿಯಿಂದ ಮೆಜೆಸ್ಟಿಕ್‌ಗೆ ಈಶಾನ್ಯ ಭಾರತದ ಮೂಲದ ಯುವಕ ಟಿಕೆಟ್ ಪಡೆಯದೇ ಪ್ರಯಾಣಿಸುತ್ತಿದ್ದನು. ಇನ್ನು ಟಿಕೆಟ್ ತಪಾಸಣೆ ತಂಡ ಬಸ್ ನಿಲ್ಲಿಸಿ ಪ್ರಯಾಣಿಕರ ಟಿಕೆಟ್ ಪರಿಶೀಲಿಸಿದ್ದಾರೆ. ಆಗ ಯುವಕ ಸಿಕ್ಕಿಬಿದ್ದಿದ್ದು 420 ರೂಪಾಯಿ ದಂಡ ಸಹ ಕಟ್ಟಿದ್ದಾನೆ. ಇನ್ನು ಟಿಕೆಟ್ ಕೊಡದಿದ್ದಕ್ಕೆ ಬಸ್ ಕಂಡಕ್ಟರ್ ಗೂ ದಂಡ ವಿಧಿಸಿದ್ದಾರೆ. ಇದರಿಂದ ಕೋಪಗೊಂಡ ಕಂಡಕ್ಟರ್ ಪ್ರಯಾಣಿಕನಿಗೆ ಕಪಾಳಮೋಕ್ಷ ಮಾಡಿದ್ದಾನೆ.

ಈ ವಿಡಿಯೋ ಅಪ್ಲೋಡ್ ಮಾಡಿರುವ ಪ್ರಯಾಣಿಕ ಕಂಡಕ್ಟರ್ ಬಳಿ ಹೋಗಿ ನಾನೇ ಟಿಕೆಟ್ ಖರೀದಿಸಬೇಕು ಎಂದು ತಿಳಿದಿರಲಿಲ್ಲ. ಕಂಡಕ್ಟರ್ ಬರುತ್ತಾರೆ ಎಂದು ಕಾಯುತ್ತಿದ್ದೆ. ಅಷ್ಟರಲ್ಲೇ ತಪಾಸಣೆ ತಂಡ ಬಸ್ ಹತ್ತಿತ್ತು ಎಂದು ಬರೆದುಕೊಂಡಿದ್ದಾರೆ. ಈ ಸಂಬಂಧ ದೂರು ದಾಖಲಾಗಿದೆ ಎಂದು ಬಿಎಂಟಿಸಿ ಹೇಳಿದೆ. ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ವಿವಾದವನ್ನು ಹುಟ್ಟುಹಾಕಿದ್ದು ಪ್ರಯಾಣಿಕರು ದಾಳಿಯನ್ನು ಖಂಡಿಸಿದ್ದಾರೆ. ಅಲ್ಲದೆ ಕಂಡಕ್ಟರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಪ್ರಯಾಣಿಕನಿಗೆ ಕಂಡಕ್ಟರ್ ಕಪಾಳಮೋಕ್ಷ
ಮಕ್ಕಳ ಕಣ್ಣೀರಿಗೂ ಕರಗದ ಮನಸ್ಸು: ವಿಚ್ಛೇನದ ನೀಡಿ ಪ್ರಿಯಕರನ ಜೊತೆ ಹೋಗುತ್ತಿದ್ದ ತಾಯಿಯನ್ನು ಪರಿಪರಿಯಾಗಿ ಬೇಡಿದ ಮಕ್ಕಳು, Video!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com