

ಬೆಂಗಳೂರು: ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ಈ ಹಿಂದೆ ಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರಿಗಾಗಿ ತಮ್ಮ ಕ್ಷೇತ್ರವನ್ನೇ ತ್ಯಾಗ ಮಾಡಿದ್ದರು.
ಹೃದಯಾಘಾತದಿಂದ ನಿಧನರಾದ ಮಾಜಿ ಶಾಸಕ ಆರ್ ವಿ ದೇವರಾಜ್ ಅವರು ಹಿಂದೊಮ್ಮೆ ಮಾಜಿ ಸಿಎಂ ಎಸ್ ಎಂ ಕೃಷ್ಣಾ ಅವರಿಗಾಗಿ ತಮ್ಮ ಕ್ಷೇತ್ರವನ್ನೇ ಬಿಟ್ಟುಕೊಟ್ಟಿದ್ದರು. ಆ ಸಮಯದಲ್ಲಿ ಕಾಂಗ್ರೆಸ್ಗೆ ಪೂರಕವಾಗಿದ್ದ 2008ರಲ್ಲಿ ಕ್ಷೇತ್ರ ಮರುವಿಂಗಡನೆಯಾದಾಗ ಎಸ್ಎಂ ಕೃಷ್ಣಗೆ ಬೆಂಗಳೂರಲ್ಲಿ ಸ್ಪರ್ಧಿಸಲು ಕ್ಷೇತ್ರ ಬಿಟ್ಟುಕೊಡುತ್ತಾರೆ. ಚಾಮರಾಜಪೇಟೆ ಕ್ಷೇತ್ರ ಆ ಸಮಯದಲ್ಲಿ ಕಾಂಗ್ರೆಸ್ಗೆ ಪೂರಕವಾಗಿತ್ತು.
ಗೆದ್ದು ಬೀಗಿದ್ದ ಎಸ್ ಎಂ ಕೃಷ್ಣ
ಇನ್ನು ಅಂದಿನ ಚುನಾವಣೆಯಲ್ಲಿ ಎಸ್ ಎಂ ಕೃಷ್ಣ ನಿರೀಕ್ಷೆಯಂತೆಯೇ ಗೆದ್ದು ಬೀಗಿದ್ದರು. ಅಂದಿನ ಚುನಾವಣೆಯಲ್ಲಿ ಎಸ್ ಎಂ ಕೃಷ್ಣ 13,685 ಮತಗಳ ಅಂತರದಲ್ಲಿ ಜಯಭೇರಿ ಬಾರಿಸಿದ್ದರು.
ಎಸ್ ಎಂ ಕೃಷ್ಣ ಜೊತೆ ಆಪ್ತತೆ
ಈ ಚುನಾವಣೆ ಬಳಿಕ ಆರ್ ವಿ ದೇವರಾಜ್ ಮತ್ತು ಎಸ್.ಕೃಷ್ಣ ಆಪ್ತತೆ ಬೆಳೆದಿತ್ತು. ಎಸ್.ಕೃಷ್ಣ ಸಿಎಂ ಆಗಿದ್ದಾಗ ಆರ್.ವಿ ದೇವರಾಜ್ ಸಾಕಷ್ಟು ಹುದ್ದೆಗಳನ್ನು ಅಲಂಕರಿಸಿದ್ದರು. ಬಳಿಕ ಚಿಕ್ಕಪೇಟೆ ಕ್ಷೇತ್ರ ಚುನಾವಣೆ ಸ್ಪರ್ಧಿಸಿದ್ದರು.
ಆರ್ ವಿ ಚಾಮರಾಜಪೇಟೆ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಚಾಮರಾಜಪೇಟೆ ಕ್ಷೇತ್ರದ ಕ್ಷೇತ್ರ ಪುನರ್ವಿಂಗಡಣೆ ನಂತರ ಚಿಕ್ಕಪೇಟೆಯ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಬಳಿಕ 2016ರಲ್ಲಿ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿದ್ದರು.
ಆರ್ ವಿ ದೇವರಾಜ್ ರಾಜಕೀಯ ಹಿನ್ನಲೆ
1957 ಡಿಸೆಂಬರ್ 3ರಂದು ಜನಿಸಿದ್ದ ಆರ್ ವಿ ದೇವರಾಜ್ ಅವರು ಶಿಕ್ಷಣದ ಬಳಿಕ 1989-99ರಲ್ಲಿ ಚಾಮರಾಜಪೇಟೆ ಶಾಸಕರಾಗಿದ್ದರು. 2000ರಿಂದ ಅಕ್ಟೋಬರ್ 2007ರವರೆಗೆ ಕೆಎಸ್‌ಆರ್‌ಟಿಸಿ ಅಧ್ಯಕ್ಷ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಎಐಸಿಸಿ ಸದಸ್ಯರಾಗಿದ್ದರು. 2000 ರಿಂದ ಅಕ್ಟೋಬರ್ 2007 ರವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
2018ರಲ್ಲಿ ಕಾಂಗ್ರೆಸ್‌ನ ಆರ್. ವಿ. ದೇವರಾಜ್ ಸೋಲಿಸಿ ಬಿಜೆಪಿಯ ಉದಯ್ ಗರುಡಾಚಾರ್ ಶಾಸಕರಾಗಿ ಆಯ್ಕೆಯಾಗಿದ್ದರು. ಅವರು ಚಾಮರಾಜಪೇಟೆ ಕ್ಷೇತ್ರದಿಂದ ಎರಡು ಬಾರಿ ಮತ್ತು ಒಮ್ಮೆ ಚಿಕ್ಕಪೇಟೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಚಾಮರಾಜಪೇಟೆ ಕ್ಷೇತ್ರದ ವಿಂಗಡಣೆಯ ನಂತರ, ಅವರು ಚಿಕ್ಕಪೇಟೆಯ ಕಾಂಗ್ರೆಸ್ ಅಭ್ಯರ್ಥಿಯಾದರು.
ಆರ್ ವಿ ದೇವರಾಜ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಪಕ್ಷದಲ್ಲಿ ದೀರ್ಘಕಾಲ ಸದಸ್ಯರಾಗಿ ಮತ್ತು ನಾಯಕರಾಗಿ ಸೇವೆ ಸಲ್ಲಿಸಿದ್ದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಪ್ರಧಾನ ಕಾರ್ಯದರ್ಶಿ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (AICC) ಸದಸ್ಯರಾಗಿ ಹುದ್ದೆಗಳನ್ನು ಅಲಂಕರಿಸಿದ್ದರು.
ಆರ್ ವಿ ದೇವರಾಜ್ 2000 ರಿಂದ 2007 ರವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು. 2004ರ ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಮಾಜಿ ಸಿಎಂ ಎಸ್ ಕೃಷ್ಣ ಅವರಿಗಾಗಿ ಆರ್. ವಿ. ದೇವರಾಜ್ ತಮ್ಮ ಕ್ಷೇತ್ರ ಬಿಟ್ಟುಕೊಟ್ಟಿದ್ದರು.
ಎಸ್ ಎಂ ಕೃಷ್ಣ ಅವರು ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧಿಸಲು ಅನುಕೂಲವಾಗುವಂತೆ, ಆರ್ ವಿ ದೇವರಾಜ್ ಅವರು ಸ್ವಯಂಪ್ರೇರಿತರಾಗಿ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದರು. ಅಂತೆಯೇ ಎಸ್ ಎಂ ಕೃಷ್ಣ ಅವರು 2013 ರ ಚುನಾವಣೆಯಲ್ಲಿ ಚಿಕ್ಕಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಆರ್ ವಿ ದೇವರಾಜ್ ಪರವಾಗಿ ಪ್ರಚಾರ ನಡೆಸಿದ್ದರು.
ಬಳಿಕ ಆರ್ ವಿ ದೇವರಾಜ್ ಅವರು ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ (2000-2004) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಅವರು ಚಿಕ್ಕಪೇಟೆ ಕ್ಷೇತ್ರಕ್ಕೆ INC ಅಭ್ಯರ್ಥಿಯಾಗಿ ಸ್ಪರ್ಧಿಸಿದರು ಆದರೆ ಪ್ರಸ್ತುತ ಶಾಸಕರಾಗಿರುವ ಭಾರತೀಯ ಜನತಾ ಪಕ್ಷದ (BJP) ಉದಯ್ ಬಿ ಗರುಡಾಚಾರ್ ವಿರುದ್ಧ ಸೋತಿದ್ದರು.
Advertisement