

ನವದೆಹಲಿ: ಜಲಜೀವನ್ ಮಿಷನ್ ಯೋಜನೆಯಲ್ಲಿ ಅಕ್ರಮ ಹಾಗೂ ಕಳಪೆ ಗುಣಮಟ್ಟದ ಕಾಮಗಾರಿ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯದ 99 ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
ಲೋಕಸಭೆಯಲ್ಲಿ ಸೋಮವಾರ ನಡೆದ ಪ್ರಶ್ನೋತ್ತರ ಅವಧಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ ಅವರು, ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ 169 ದೂರುಗಳು ಸಲ್ಲಿಕೆಯಾಗಿವೆ. ಒಂಬತ್ತು ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗಿದೆ. ಒಂದು ಪ್ರಕರಣದ ಬಗ್ಗೆ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಲಾಗಿದೆ ಎಂದರು.
ಯೋಜನೆಯ ಅನುಷ್ಠಾನದಲ್ಲಿ ಅಕ್ರಮ ಆಗಿದೆ ಎಂದು ಆರೋಪಿಸಿ 32 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಂದ 17,036 ದೂರುಗಳು ಬಂದಿವೆ. ಈ ಪೈಕಿ ಶೇ 8ರಷ್ಟು ದೂರುಗಳು ಉತ್ತರ ಪ್ರದೇಶದಿಂದಲೇ (14,212) ಸಲ್ಲಿಕೆಯಾಗಿವೆ. ಈ ರಾಜ್ಯದಲ್ಲಿ 171 ಅಧಿಕಾರಿಗಳು ಹಾಗೂ 119 ಗುತ್ತಿಗೆದಾರರ ವಿರುದ್ಧ ಕ್ರಮ ವಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Advertisement