

ಮಂಡ್ಯ/ನವದೆಹಲಿ: ಪ್ರತಿಭಟನೆ ಬಿಟ್ಟು ಮಾತುಕತೆಗೆ ದೆಹಲಿಗೆ ಬರುವಂತೆ ಅನಿರ್ದಿಷ್ಟಾವಧಿ ಮುಷ್ಕರಕ್ಕಿಳಿದಿರುವ ಅಕ್ಷರ ದಾಸೋಹ ನೌಕರರು, ಅಂಗನವಾಡಿ ಕಾರ್ಯಕರ್ತೆರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆಹ್ವಾನ ನೀಡಿದ್ದಾರೆ.
ಜಿಲ್ಲಾಧಿಕಾರಿ ಕುಮಾರ್ ಅವರ ಮೂಲಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿ ಶ್ರೀಕುಮಾರಿ ಜೊತೆ ಕುಮಾರಸ್ವಾಮಿಯವರು ದೂರವಾಣಿಯಲ್ಲಿ ಮಾತನಾಡಿದರು.
ನಿಮ್ಮ ಸಂಘದ ಪ್ರತಿನಿಧಿಗಳಲ್ಲಿ 10 ಜನ ಪ್ರಮುಖರು ದೆಹಲಿಗೆ ಬನ್ನಿ. ನಾನೇ ಸಂಬಂಧಪಟ್ಟ ಸಚಿವರು, ಅಧಿಕಾರಿಗಳ ಜೊತೆ ಸಭೆ ಏರ್ಪಾಡು ಮಾಡಿಸುತ್ತೇನೆ. ನೀವು ಬಂದು ಹೋಗುವ ವಿಮಾನಯಾನ ವೆಚ್ಚ ಹಾಗೂ ದೆಹಲಿಯಲ್ಲಿ ವಸತಿ ವ್ಯವಸ್ಥೆಯನ್ನು ನಾನೇ ಕಲ್ಪಿಸುವೆ ಎಂದು ಭರವಸೆ ನೀಡಿದ್ದಾರೆ.
Advertisement