

ಕಲಬುರಗಿ: ಕಲ್ಯಾಣ ಕರ್ನಾಟಕ ಜನರ ಬಹುದಿನಗಳ ಬೇಡಿಕೆಯಾಗಿದ್ದ ಕಲಬುರಗಿ ಮತ್ತು ಬೆಂಗಳೂರು ವಂದೇ ಭಾರತ್ ರೈಲಿನ ಸಂಚಾರದ ಸಮಯ ಬದಲಾವಣೆಗೆ ರೈಲ್ವೆ ಇಲಾಖೆ ಈಡೇರಿಸಿದೆ.
ಜನವರಿ 1 ರಿಂದ ಅನ್ವಯವಾಗುವಂತೆ ಕಲಬುರಗಿ–ಬೆಂಗಳೂರು ವಂದೇ ಭಾರತ್ ರೈಲಿನ ಸಮಯವನ್ನು ಬದಲಾಯಿಸಲಾಗಿದ್ದು, ಕಲಬುರಗಿಯಿಂದ ಬೆಳಗ್ಗೆ 5:15 ರ ಬದಲು ಬೆಳಗ್ಗೆ 06:10 ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 02:10ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.
ಇನ್ನು ಬೆಂಗಳೂರಿನಿಂದ ಕಲಬುರಗಿಗೆ ಹೊರಡುವ ಸಮಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಆದರೆ, ಇದೀಗ ಈ ರೈಲು ಕಲಬುರಗಿಗೆ ಮೊದಲಿಗಿಂತ 45 ನಿಮಿಷ ಬೇಗ ಅಂದರೆ ರಾತ್ರಿ 11:30 ಗಂಟೆಗೆ ಬದಲಾಗಿ ರಾತ್ರಿ 10:45 ಕ್ಕೆ ತಲುಪಲಿದೆ. ಒಟ್ಟಾರೆ ಪ್ರಯಾಣದ ಸಮಯ ಇದೀಗ 8 ಗಂಟೆಯಲ್ಲಿ ಪೂರ್ಣಗೊಳ್ಳಲಿದೆ.
ಪ್ರಯಾಣಿಕರ ಕೋರಿಗೆ ಮೇರೆಗೆ ವಂದೇ ಭಾರತ್ ರೈಲು ಇನ್ಮುಂದೆ ಪುಟ್ಟಪರ್ತಿ ಸತ್ಯಸಾಯಿ ಪ್ರಶಾಂತಿ ನಿಲಯಂನಲ್ಲಿ ನಿಲುಗಡೆ ನೀಡಲಾಗಿದೆ.
Advertisement