ಕಸದ ಮಾಫಿಯಾಗೆ ಮಣಿಯಲ್ಲ, 33 ಪ್ಯಾಕೇಜ್ ಮೂಲಕ ತ್ಯಾಜ್ಯ ವಿಲೇವಾರಿಗೆ: ಡಿ.ಕೆ. ಶಿವಕುಮಾರ್

ಈ 33 ಪ್ಯಾಕೇಜ್‌ಗೆ ನ್ಯಾಯಾಲಯ ಸಮ್ಮತಿ ನೀಡಿದೆ. ಸ್ವಲ್ಪ ‌ದಿನಗಳಲ್ಲೇ ಇವು ಕಾರ್ಯರೂಪಕ್ಕೆ ಬರಲಿದೆ. ಕಸದ ಮಾಫಿಯಾ ಎನ್ನುವ ಪದವನ್ನು ನಾನು ಪದೇ ಪದೆ ಏಕೆ ಬಳಸುತ್ತಿದ್ದೇನೆ ಎಂದರೆ. ಇವರು ಪ್ರತಿ ಹಂತದಲ್ಲಿ ನ್ಯಾಯಾಲಯಗಳಿಗೆ ತೆರಳಿ ತಡೆಯಾಜ್ಞೆ ತಂದು ಸರ್ಕಾರಕ್ಕೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು.
Deputy Chief Minister DK Shivakumar inspects a scale model of the integrated solid waste segregation unit at Kannahalli on Magadi Main Road on Monday
ಮಾಗಡಿ ಮುಖ್ಯರಸ್ತೆಯ ಕನ್ನಹಳ್ಳಿಯಲ್ಲಿ ನಿರ್ಮಿಸಲಾಗಿರುವ ಸಮಗ್ರ ಘನತ್ಯಾಜ್ಯ ವಿಂಗಡಣೆ ಘಟಕದ ಮಾಪಕ ಮಾದರಿಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಮವಾರ ಪರಿಶೀಲಿಸಿದರು.
Updated on

ಬೆಂಗಳೂರು: ಕಸದ ಮಾಫಿಯಾದವರು ನನ್ನ ಮೇಲೆ ಏನೇನು ಗೂಬೆ ಕೂರಿಸಬೇಕೋ ಅದೆಲ್ಲವನ್ನು ಮಾಡಿದರು. ಆದರೆ, ಅದಾವುದಕ್ಕೂ ಬಗ್ಗದೇ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿಗೆ ತೀರ್ಮಾನಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು.

ಮಾಗಡಿ ಮುಖ್ಯ ರಸ್ತೆಯ ಕನ್ನಹಳ್ಳಿಯಲ್ಲಿ ಸಮಗ್ರ ಘನ ತ್ಯಾಜ್ಯ ವಿಂಗಡಣಾ ಘಟಕದ 1ನೇ ಹಂತಕ್ಕೆ ಸೋಮವಾರ ಶಿಲಾನ್ಯಾಸ ನೆರವೇರಿಸಿ ಡಿಕೆ.ಶಿವಕುಮಾರ್ ಅವರು ಮಾತನಾಡಿದರು.

ಈ 33 ಪ್ಯಾಕೇಜ್‌ಗೆ ನ್ಯಾಯಾಲಯ ಸಮ್ಮತಿ ನೀಡಿದೆ. ಸ್ವಲ್ಪ ‌ದಿನಗಳಲ್ಲೇ ಇವು ಕಾರ್ಯರೂಪಕ್ಕೆ ಬರಲಿದೆ. ಕಸದ ಮಾಫಿಯಾ ಎನ್ನುವ ಪದವನ್ನು ನಾನು ಪದೇ ಪದೆ ಏಕೆ ಬಳಸುತ್ತಿದ್ದೇನೆ ಎಂದರೆ. ಇವರು ಪ್ರತಿ ಹಂತದಲ್ಲಿ ನ್ಯಾಯಾಲಯಗಳಿಗೆ ತೆರಳಿ ತಡೆಯಾಜ್ಞೆ ತಂದು ಸರ್ಕಾರಕ್ಕೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಇವರುಗಳು ಹೇಳಿದಂತೆ ಸರ್ಕಾರ ಕೇಳಬೇಕು ಎನ್ನುವ ಧೋರಣೆ ಹೊಂದಿದ್ದರು.‌ ಇದಕ್ಕೆಲ್ಲ ಕಡಿವಾಣ ಹಾಕಲಾಗಿದೆ ಎಂದು ಹೇಳಿದರು.

ಬೆಂಗಳೂರಿನ ಕಸದ ಸಮಸ್ಯೆಗೆ ಅಂತ್ಯ ಹಾಡಲೇ ಬೇಕು ಎಂದು ನಾನು ಸಂಕಲ್ಪ ಮಾಡಿದ್ದೇನೆ. ಸ್ವಯಂಸೇವಾ ಸಂಸ್ಥೆ ಹಸಿರು ದಳದವರು ಸೇರಿ ಅತ್ಯಂತ ಕ್ಲಿಷ್ಟಕರ ಕೆಲಸ ಮಾಡುತ್ತಿದ್ದಾರೆ. ನಗರದ ಅನೇಕ ಕಡೆ ಜನರು ಎಲ್ಲೆಂದರಲ್ಲಿ ಕಸ ಎಸೆಯುವುದು, ಕಟ್ಟಡ ತ್ಯಾಜ್ಯ ಸುರಿದು ಹೋಗುತ್ತಿದ್ದಾರೆ.‌ ಇದರ ನಿಯಂತ್ರಣಕ್ಕೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ದಂಡ ಕಟ್ಟಿಸಿಕೊಳ್ಳಲಾಗುತ್ತಿದೆ. ಕಸ ಸುರಿಯುವ ವಾಹನಗಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ತಿಳಿಸಿದರು.

Deputy Chief Minister DK Shivakumar inspects a scale model of the integrated solid waste segregation unit at Kannahalli on Magadi Main Road on Monday
ನೀವೊಬ್ಬರು ಸಚಿವರು...ಹೀಗೆ ಕೇಳಿದ್ರೆ ಹೇಗೆ; ಸಚಿವ ತಿಮ್ಮಾಪುರ ವಿರುದ್ಧ ಡಿಕೆ.ಶಿವಕುಮಾರ್ ಗರಂ

ನನ್ನ ಗುರಿ, ಉದ್ದೇಶ, ಆಲೋಚನೆ, ಬದ್ದತೆ ಸ್ಪಷ್ಟವಾಗಿದೆ. ಕಸದಿಂದ ಗ್ಯಾಸ್ ತಯಾರಿಕೆಗೆ ನಾಲ್ಕು ಸಂಸ್ಥೆಗಳನ್ನು ಮಾಡಬೇಕು ಎಂದು ಹೊರಟಿದ್ದೆ. ಜಾಗದ ಸಮಸ್ಯೆಯಿಂದ ಈಗ ಎರಡು ಸ್ಥಳಗಳಲ್ಲಿ ಅವಕಾಶ ನೀಡಿ ಟೆಂಡರ್ ಕೂಡ ನೀಡಲಾಗಿದೆ. ಈ ಹಿಂದೆ 10- 12 ಕ್ಕೂ ಹೆಚ್ಚು ಸಂಸ್ಥೆಗಳು ಕಸದಿಂದ ವಿದ್ಯುತ್ ಉತ್ಪಾದನೆ ಮಾಡುತ್ತೇವೆ ಎಂದು ಬಂದು ವಿಫಲರಾಗಿದ್ದಾರೆ. 24 ಮೆ. ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ತಂತ್ರಜ್ಞಾನದಿಂದ ಯಶಸ್ವಿಯಾಗಬಹುದು ಎಂದು ಕೇಳಿದ್ದೇನೆ. ಜೊತೆಗೆ ದೆಹಲಿ, ಚೆನ್ನೈ, ಹೈದರಾಬಾದ್ ನಗರಗಳಲ್ಲಿ ಇದನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದರು.

ಕಸದಿಂದ ಗ್ಯಾಸ್ ಉತ್ಪಾದನೆಗೆ ಇಳಿದಿರುವ ಅಭಿಷೇಕ್ ಅವರ ಸಂಸ್ಥೆ ಪ್ರಾಥಮಿಕವಾಗಿ 100 ಕೋಟಿ ರೂಪಾಯಿ ಬಂಡವಾಳ ಹೂಡಲಿದೆ. ಒಟ್ಟು 300 ಕೋಟಿ ಹೂಡಿಕೆ ಮಾಡಲಿದ್ದಾರೆ. ಇವರಿಗೆ ಸರ್ಕಾರ ಎಲ್ಲಾ ರೀತಿಯ ಸಹಕಾರವನ್ನು ನೀಡಲಿದೆ. ಈ ಪ್ರಯೋಗ ಯಶಸ್ವಿಯಾದರೆ ರಾಜ್ಯದಲ್ಲಿ ಇನ್ನೂ ಒಂದಷ್ಟು ಕಡೆ ಸ್ಥಾಪಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಯಾವುದೇ ಯಶಸ್ಸು ಸಿಗಬೇಕಾದರೆ ಶ್ರಮ ಅಗತ್ಯ. ಶ್ರಮವಿಲ್ಲದೆ ಏನೂ ಸಿಗುವುದಿಲ್ಲ. ಇದು ಸ್ವಲ್ಪ ಸ್ಪರ್ಧಾತ್ಮಕ ಕೆಲಸ ಏಕೆಂದರೆ ಇದಕ್ಕೆ ಸಾಕಷ್ಟು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ನಿಮಗೆ ಶುಭವಾಗಲಿ, ನಾನು ಹಾಗೂ ನಮ್ಮ ಅಧಿಕಾರಿಗಳು ಈ ಸಂಸ್ಥೆಯ ಜೊತೆಯಲ್ಲಿರುತ್ತೇವೆ ಎಂದು ಹೇಳಿದರು.

ವಿದ್ಯುತ್ ಉತ್ಪಾದನೆಗೆ ಒಂದಷ್ಟು ಸಂಸ್ಥೆಗಳಿಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಅವಕಾಶ ನೀಡಲಾಗಿತ್ತು. ಆದರೆ, ಅವರು ವಿದ್ಯುತ್ ಉತ್ಪಾದನೆಯಲ್ಲಿ ವಿಫಲರಾಗಿದ್ದಾರೆ. ಈಗ ಒಂದೆರಡು ಸಂಸ್ಥೆಗೆ ಹೊರತು ಪಡಿಸಿ ಮಿಕ್ಕವರನ್ನು ರದ್ದು ಮಾಡಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಬೀದಿಗಳಲ್ಲಿ ಕಸ ಎಸೆಯುವವರ ವೀಡಿಯೊಗಳನ್ನು ಚಿತ್ರೀಕರಿಸುವ ವ್ಯಕ್ತಿಗಳಿಗೆ ಬಹುಮಾನ ನೀಡುವ ಬಗ್ಗೆ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ರಸ್ತೆಗಳಲ್ಲಿ ಕಸ ಎಸೆಯುವವರನ್ನು ಮೇಲ್ವಿಚಾರಣೆ ಮಾಡಲು ಕ್ಯಾಮೆರಾಗಳನ್ನು ಅಳವಡಿಸುತ್ತಿದ್ದೇವೆ. ಸಂಚಾರ ಇಲಾಖೆ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುತ್ತಿದೆ. ನಗರವನ್ನು ಸ್ವಚ್ಛವಾಗಿಡಲು ಜನರ ಸಹಕಾರ ಅಗತ್ಯ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com