ಎಥೆನಾಲ್ MSP, FRP ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ: ಸಿಎಂ ಸಿದ್ದರಾಮಯ್ಯ

ಈ ಬಾರಿ ರೈತರು ಮೆಕ್ಕೆಜೋಳವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದು, ಸುಮಾರು 55 ಲಕ್ಷ ಮೆ.ಟನ್ ಉತ್ಪಾದನೆಯಾಗುವ ಅಂದಾಜಿದೆ. ಪೌಲ್ಟ್ರಿಗಳು 20 ಲಕ್ಷ ಮೆಟ್ರಿಕ್ ಟನ್ ಗಿಂತ ಹೆಚ್ಚು ಖರೀದಿಸುತ್ತದೆ. ಪಶು ಆಹಾರ 4-5 ಲಕ್ಷ ಟನ್ ಹಾಗೂ 7-10 ಲಕ್ಷ ಟನ್ ಎಥೆನಾಲ್ ಗಾಗಿ ಬಳಸುತ್ತಾರೆ.
CM Sidaramaiah and DCM D K Shivakumar
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್
Updated on

ಬೆಂಗಳೂರು: ಎಥೆನಾಲ್ ಹಾಗೂ ಎಂಎಸ್‌ಪಿ, ಎಫ್‌ಆರ್‌ಪಿ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೆ ಕೇಂದ್ರ ಸರ್ಕಾರದವರು ನಮಗೇನು ಜವಾಬ್ದಾರಿ ಇಲ್ಲವೆಂಬಂತೆ ಮಾತನಾಡುತ್ತಾರೆಂದು ಮೋದಿ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಕಿಡಿಕಾರಿದ್ದಾರೆ.

ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿದರು.

ಭೇಟಿ ವೇಳೆ ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ. ಡಿಸೆಂಬರ್ 8 ರಂದು ಬೆಳಗಾವಿಯಲ್ಲಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಇಂದು ಚರ್ಚಿಸಲಾಗಿದೆ. ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ. ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ರೈತರು, ರೈತ ಮುಖಂಡರು, ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಿ, ಸಮಸ್ಯೆಯ ಪರಿಹಾರಕ್ಕೆ ಅಂತಿಮ ರೂಪವನ್ನು ನೀಡಲಾಗಿದೆ. ಕಬ್ಬು ಒಂದು ಟನ್ ಗೆ ಸರ್ಕಾರದಿಂದ 50 ರೂ. ಹೆಚ್ಚುವರಿ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ.

ಮೆಕ್ಕೆಜೋಳ ಖರೀದಿಯ ಬಗ್ಗೆ ರೈತರು, ಡಿಸ್ಟಿಲರಿ ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ 2,400 ರೂ.ಗಳನ್ನು ಬೆಂಬಲ ಬೆಲೆಯಾಗಿ ನಿಗದಿಪಡಿಸಿದೆ. ಆದರೆ ಮಾರುಕಟ್ಟೆ ದರ 1,900 ರಿಂದ 2,100 ರೂ. ವರೆಗೆ ಇರುವುದರಿಂದ ಡಿಸ್ಟಿಲರಿ ಕಂಪನಿಗಳು, ಎಂಎಸ್ ಪಿ ದರದಲ್ಲಿಯೇ ರೈತರಿಂದ ಮೆಕ್ಕೆಜೋಳವನ್ನು ಖರೀದಿಸಬೇಕೆಂದು ಮನವೊಲಿಸಲಾಗುತ್ತಿದೆ. ಅಂತೆಯೇ ಪೌಲ್ಟ್ರಿ ಫಾರಂಗಳು , ಪಶು ಆಹಾರಗಳಿಗಾಗಿ ಮೆಕ್ಕೆ ಜೋಳವನ್ನು ಬಳಸಲಾಗುತ್ತದೆ.

CM Sidaramaiah and DCM D K Shivakumar
ಕಬ್ಬು ಬೆಳೆಗಾರರ ಹೋರಾಟ ಬೇರೆ ರಾಜ್ಯಗಳಲ್ಲೇಕಿಲ್ಲ?: ರಾಜ್ಯಕ್ಕೆ ಕೇಂದ್ರ ಸರ್ಕಾರ ಪ್ರಶ್ನೆ

ಈ ಬಾರಿ ರೈತರು ಮೆಕ್ಕೆಜೋಳವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದು, ಸುಮಾರು 55 ಲಕ್ಷ ಮೆ.ಟನ್ ಉತ್ಪಾದನೆಯಾಗುವ ಅಂದಾಜಿದೆ. ಪೌಲ್ಟ್ರಿಗಳು 20 ಲಕ್ಷ ಮೆಟ್ರಿಕ್ ಟನ್ ಗಿಂತ ಹೆಚ್ಚು ಖರೀದಿಸುತ್ತದೆ. ಪಶು ಆಹಾರ 4-5 ಲಕ್ಷ ಟನ್ ಹಾಗೂ 7-10 ಲಕ್ಷ ಟನ್ ಎಥೆನಾಲ್ ಗಾಗಿ ಬಳಸುತ್ತಾರೆ.

ಎಥೆನಾಲ್ ಹಾಗೂ ಎಂಎಸ್‌ಪಿ, ಎಫ್‌ಆರ್‌ಪಿ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೆ ಕೇಂದ್ರ ಸರ್ಕಾರದವರು ನಮಗೇನು ಜವಾಬ್ದಾರಿ ಇಲ್ಲವೆಂಬಂತೆ ಮಾತನಾಡುತ್ತಾರೆ. ಸಂಸದರ ಸಭೆ ಕರೆಯಬೇಕು ಎಂದು ಚರ್ಚಿಸಲಾಗಿದ್ದು, ಡಿಸೆಂಬರ್ 8 ರಂದು ಸಂಸತ್ತು ಮುಂದೂಡಬಹುದೆಂದು ಭಾವಿಸಿದ್ದು, ಅಂದೇ ಸಭೆ ಕರೆಯಬೇಕೆಂದು ತೀರ್ಮಾನಿಸಲಾಗಿದೆ. ಏಕೆಂದರೆ ಅಂದು ರಾಜ್ಯದ ಸಂಸದರು ಅಲ್ಲಿಯೇ ಉಪಸ್ಥಿತರಿರುತ್ತಾರೆಂದು ತಿಳಿಸಿದರು.

ಈ ನಡುವೆ ಮದ್ದೂರು ಪಟ್ಟಣದ ಟಿ.ಬಿ.ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ವಿಷಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಮಂಗಳವಾರ ಸಭೆ ನಡೆಸಿ, ಚರ್ಚಿಸಿದರು.

2025 -26 ನೇ ಸಾಲಿನ ವಾರ್ಷಿಕ ಬಜೆಟ್ ನಲ್ಲಿ ಮದ್ದೂರು ನಗರದಲ್ಲಿ ರಸ್ತೆ ಅಗಲೀಕರಣಕ್ಕಾಗಿ ವಿಸ್ತೃತ ಯೋಜನಾ ವರದಿಗಳನ್ನು ತಯಾರಿಸಲು ಘೋಷಿಸಲಾಗಿತ್ತು. ಅದರಂತೆ ಲೋಕೋಪಯೋಗಿ ಇಲಾಖೆಯಿಂದ ವಿಸ್ತೃತ ಯೋಜನಾ ವರದಿಯನ್ನೂ ತಯಾರಿಸಲಾಗಿದೆ. ಮದ್ದೂರು ಪಟ್ಟಣದ ಟಿ.ಬಿ. ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆಯು ಜನ ನಿಬಿಡ ಹಾಗೂ ವಾಣಿಜ್ಯ ಚಟುವಟಿಕೆಯುಳ್ಳ ಜಿಲ್ಲಾ ಮುಖ್ಯ ರಸ್ತೆಯಾಗಿದ್ದು, ಅಧಿಕ ವಾಹನ ಸಂಚಾರವಿದ್ದು ಪುರಸಭೆಯ ಸುಪರ್ದಿಯಲ್ಲಿರುತ್ತದೆ.

ಬಿಎಂಐಸಿಎಪಿಎ ಅವರು ತಯಾರಿಸಿರುವ ಯೋಜನಾ ನಕ್ಷೆಯಲ್ಲಿ ಇದನ್ನು 100 ಅಡಿ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಗುರುತಿಸಲಾಗಿದ್ದು, ರಸ್ತೆ ಅಗಲೀಕರಣ ಕಾಮಗಾರಿಯ ಯೋಜನಾ ವರದಿ ಪರಿಶೀಲಿಸಿ, ರಸ್ತೆಯನ್ನು 80 ಅಡಿ ರಸ್ತೆಯಾಗಿ ವಿಸ್ತರಿಸಲು ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com