

ಬೆಂಗಳೂರು: ಮುಖ್ಯಮಂತ್ರಿಯವರು ಯಾರೊಂದಿಗೋ ಮಾತನಾಡುವಾಗ ಆಡಿರುವ ಮಾತುಗಳಿಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ. ಆ ಬಗ್ಗೆ ಹೆಚ್ಚಿನ ವಿಶ್ಲೇಷಣೆಯೂ ಅನಗತ್ಯ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಬುಧವಾರ ಪ್ರತಿಕ್ರಿಯಿಸಿದರು. ರಾಜಕೀಯ ಯಾರಿಗೂ ಶಾಶ್ವತವಲ್ಲ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು.
ಮಂಗಳೂರಿನಲ್ಲಿ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ವೇಣುಗೋಪಾಲ್ ಆಗಮಿಸಿದ್ದಾರೆ. ಕಾರ್ಯಕ್ರಮ ಮುಗಿದ ನಂತರ ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಇರುವ ಕಾರಣ ಅಲ್ಲಿಗೆ ತೆರಳಲಿದ್ದಾರೆ ಎಂದು ತಿಳಿಸಿದರು.
ಮಂಗಳೂರಿನಲ್ಲಿ ವೇಣುಗೋಪಾಲ್ ಅವರಿಗೆ ಡಿ.ಕೆ. ಶಿವಕುಮಾರ್ ಅಭಿಮಾನಿಗಳು ಡಿ.ಕೆ., ಡಿ.ಕೆ. ಎಂದು ಕೂಗಿರುವ ಬಗ್ಗೆ ಕೇಳಿದಾಗ, ಅಭಿಮಾನದಿಂದ ಕೆಲವರು ಕೂಗಿರುತ್ತಾರೆ. ಆದರೆ ಅವರು ಯಾರಿಗೂ ಮುತ್ತಿಗೆ ಹಾಕಿಲ್ಲ” ಎಂದು ತಿಳಿಸಿದರು.
Advertisement