ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ: ಚಳಿಗಾಲ ಅಧಿವೇಶನ ಸಮಯದಲ್ಲಿ ಬೆಳಗಾವಿಯಲ್ಲಿ ವ್ಯಾಪಕ ಭದ್ರತೆ

ಅಧಿವೇಶನ ವೇಳೆಗೆ 6ರಿಂದ 8 ಸಾವಿರ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಅಧಿವೇಶನದಲ್ಲಿ ಸಚಿವಾಲಯ ಸಿಬ್ಬಂದಿ ಸೇರಿದಂತೆ 12 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಲಿದ್ದಾರೆ.
Representational image
ಸಾಂದರ್ಭಿಕ ಸಂಗ್ರಹ ಚಿತ್ರ
Updated on

ಬೆಳಗಾವಿ: ಡಿಸೆಂಬರ್ 8ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟ ಹಿನ್ನೆಲೆ ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಕೇಂದ್ರ ಗುಪ್ತಚರ ಇಲಾಖೆಯಿಂದ ಎಚ್ಚರಿಕೆಯ ಸಂದೇಶ ಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗಳು ಹೈಅಲರ್ಟ್‌ ಆಗಿವೆ.

ಅಧಿವೇಶನ ವೇಳೆಗೆ 6ರಿಂದ 8 ಸಾವಿರ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಅಧಿವೇಶನದಲ್ಲಿ ಸಚಿವಾಲಯ ಸಿಬ್ಬಂದಿ ಸೇರಿದಂತೆ 12 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಲಿದ್ದಾರೆ.

Representational image
ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬೆಳಗಾವಿ ಅಧಿವೇಶನ ವಿಸ್ತರಿಸುವಂತೆ ಬಿಜೆಪಿ ಆಗ್ರಹ

ಸುವರ್ಣ ಸೌಧ ಆವರಣದಲ್ಲಿ ನಿಷೇಧಾಜ್ಞೆ

ಅಧಿವೇಶನ ಅವಧಿಯಲ್ಲಿ ಸುವರ್ಣ ಸೌಧ ಆವರಣದಲ್ಲಿ ಸಾಲು ಸಾಲು ಪ್ರತಿಭಟನೆಗಳು ನಡೆಯುತ್ತವೆ. ಹೀಗಾಗಿ ಪ್ರತಿದಿನ 50 ಸಾವಿರ ಜನ ಸೇರುವ ಸಾಧ್ಯತೆ ಇದೆ. ಆ ಸಂದರ್ಭದಲ್ಲಿ ಯಾವುದೇ ಅಚಾತುರ್ಯ, ಅವಘಡ ಸಂಭವಿಸದಂತೆ ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ. ಸುವರ್ಣ ವಿಧಾನಸೌಧದ ಸುತ್ತಮುತ್ತ 3 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com