

ಬೆಂಗಳೂರು: ನಟ ದರ್ಶನ್ ಎರಡನೇ ಆರೋಪಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳ ವಿಚಾರಣೆಗೆ ದಿನಾಂಕ ನಿಗದಿ ಆಗಿದ್ದು, ಡಿಸೆಂಬರ್ 17ರಿಂದ ಸಾಕ್ಷ್ಯ ವಿಚಾರಣೆ ಆರಂಭವಾಗಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸ್ಥಳೀಯ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ನಂತರ ನ್ಯಾಯಾಧೀಶರು ಮೃತ ದುರ್ದೈವಿ ರೇಣುಕಾಸ್ವಾಮಿಯವರ ತಂದೆ ಹಾಗೂ ತಾಯಿಗೂ ಸಮನ್ಸ್ ಜಾರಿಗೊಳಿಸಿದ್ದಾರೆ.
ಡಿಸೆಂಬರ್ 17ರಿಂದ ಪ್ರಕರಣದ ಸಾಕ್ಷಿಗಳ ವಿಚಾರಣೆ ಆರಂಭವಾಗುತ್ತಿದ್ದು, ಸಹಾಯಕ ಎಸ್ಪಿಪಿ ಸಚಿನ್ ಅವರು ಸಾಕ್ಷಿಗಳ ಪಟ್ಟಿಯನ್ನು ಕೋರ್ಟ್ಗೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ರೇಣುಕಾಸ್ವಾಮಿಯವರ ತಂದೆ, ತಾಯಿ ಹಾಗೂ ರೇಣುಕಾಸ್ವಾಮಿಯ ಮೃತದೇಹವನ್ನು ಮೊದಲು ನೋಡಿದ್ದ ಬೆಂಗಳೂರಿನ ವಾಚ್ ಮ್ಯಾನ್ ಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಪಟ್ಟಿಯಲ್ಲಿರುವ ಮೂವರಿಗೆ ಸಾಕ್ಷಿಗಳಿಗೆ ಸಮನ್ಸ್ ಜಾರಿಗೊಳಿಸಲಾಗಿದೆ. ಇನ್ನೂ ಯಾರಿಗೆ ಸಮನ್ಸ್ ಜಾರಿಗೊಳಿಸಬೇಕು ಎಂಬುದನ್ನು ಡಿ. 4ರಂದು ತೀರ್ಮಾನಿಸಲಾಗುತ್ತದೆ ಎಂದು ಹೇಳಿದ ನ್ಯಾಯಮೂರ್ತಿಗಳು ಪ್ರಕರಣದ ಮುಂದಿನ ವಿಚಾರಣೆಯನ್ನು ಡಿ. 17ಕ್ಕೆ ಮುಂದೂಡಿದರು.
Advertisement