ಮಹಿಳೆಯರಿಗೆ ಮುಟ್ಟಿನ ರಜೆ ನೀಡುವುದು ಪುರುಷರನ್ನು ಕಡೆಗಣಿಸುತ್ತಿದ್ದೇವೆ ಎಂದರ್ಥವಲ್ಲ: ಡಿ.ಕೆ ಶಿವಕುಮಾರ್

ವಿವಿಧ ವಲಯಗಳ 18 ರಿಂದ 52 ವರ್ಷ ವಯಸ್ಸಿನ ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಿಗೆ ಒಂದರಂತೆ ವರ್ಷಕ್ಕೆ 12 ಮುಟ್ಟಿನ ರಜೆಯನ್ನು (ವೇತನ ಸಹಿತ) ಕಡ್ಡಾಯಗೊಳಿಸಿ ಸರ್ಕಾರ ಕಳೆದ ತಿಂಗಳು ಆದೇಶ ಹೊರಡಿಸಿತ್ತು.
DCM DK Shivakumar
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್
Updated on

ಬೆಂಗಳೂರು: ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ರಜೆಯನ್ನು ಕಡ್ಡಾಯಗೊಳಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸರ್ಕಾರವು ಮಹಿಳೆಯರನ್ನು ಬೆಂಬಲಿಸುವ ಮತ್ತು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ. ನಾವು ಸಮಾನತೆಗೆ ಬದ್ಧರಾಗಿದ್ದೇವೆ ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸರ್ಕಾರದ ನೀತಿ. ನಾವು ಸಮಾನತೆಯನ್ನು ಪಾಲಿಸಬೇಕು; ಪುರುಷರು ಮತ್ತು ಮಹಿಳೆಯರ ನಡುವೆ ನಾವು ಯಾವುದೇ ತಾರತಮ್ಯ ಮಾಡಬಾರದು ಎಂದು ನಾನು ಭಾವಿಸುತ್ತೇನೆ. ನಾವು ಇಬ್ಬರನ್ನೂ ಸಮಾಜದಲ್ಲಿ ಒಟ್ಟಿಗೆ ಕರೆದೊಯ್ಯಬೇಕು ಮತ್ತು ಪ್ರಗತಿ ಸಾಧಿಸಬೇಕು. ಇಬ್ಬರೂ ಸಮಾಜದ ಭಾಗ ಎಂದರು.

ವಿವಿಧ ವಲಯಗಳ 18 ರಿಂದ 52 ವರ್ಷ ವಯಸ್ಸಿನ ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಿಗೆ ಒಂದರಂತೆ ವರ್ಷಕ್ಕೆ 12 ಮುಟ್ಟಿನ ರಜೆಯನ್ನು (ವೇತನ ಸಹಿತ) ಕಡ್ಡಾಯಗೊಳಿಸಿ ಸರ್ಕಾರ ಕಳೆದ ತಿಂಗಳು ಆದೇಶ ಹೊರಡಿಸಿತ್ತು. ಇದಕ್ಕೆ ವಿರೋಧ ವ್ಯಕ್ತವಾಗುತ್ತಿರುವ ನಡುವೆಯೇ ಡಿಕೆ ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.

ಮಹಿಳೆಯರ ಸಾಮರ್ಥ್ಯಗಳನ್ನು ಶ್ಲಾಘಿಸಿದ ಶಿವಕುಮಾರ್, ವಿವಿಧ ಕಾರ್ಯಕ್ರಮಗಳ ಮೂಲಕ ಅವರನ್ನು ಸಬಲೀಕರಣಗೊಳಿಸಲು ಸರ್ಕಾರ ಮಾಡುತ್ತಿರುವ ಪ್ರಯತ್ನಗಳನ್ನು ಎತ್ತಿ ತೋರಿಸಿದರು. ಮಹಿಳಾ ಸಂಘಗಳನ್ನು ಪ್ರೋತ್ಸಾಹಿಸಿದರು ಮತ್ತು ಸರಿಯಾದ ನಿರ್ದೇಶನ ಮತ್ತು ಬೆಂಬಲದೊಂದಿಗೆ ಮಹಿಳೆಯರು ಉತ್ತಮ ಸಾಧನೆ ಮಾಡಲು ಸಮರ್ಥರಾಗಿದ್ದಾರೆ ಎಂದು ಒತ್ತಿ ಹೇಳಿದರು.

DCM DK Shivakumar
ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೂ ವೇತನ ಸಹಿತ ಮುಟ್ಟಿನ ರಜೆ ವಿಸ್ತರಣೆ

'ಎಲ್ಲ ಮಹಿಳೆಯರು ಎಲ್ಲ ವಿಚಾರಗಳನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದ್ದಾರೆ. ನಾವು ಮಹಿಳೆಯರಿಗೆ ಸಾಕಷ್ಟು ಶಕ್ತಿಯನ್ನು ನೀಡಿದ್ದೇವೆ, ಬಹಳಷ್ಟು ಕಾರ್ಯಕ್ರಮಗಳನ್ನು ನೀಡಿದ್ದೇವೆ. ಮಹಿಳೆಯರು ಸಮರ್ಥರು, ಅದಕ್ಕಾಗಿಯೇ ಅವರು ಸಂಘವನ್ನು ರಚಿಸಲು ಬಯಸಿದ್ದರು. ನಾವು ಅವರನ್ನು ಪ್ರೋತ್ಸಾಹಿಸುತ್ತಿದ್ದೇವೆ... ನೀವು ಅವರಿಗೆ ಬಲ ನೀಡಿದರೆ ಮಹಿಳೆಯರು ಹೆಚ್ಚು ಸಮರ್ಥರು, ಆದರೆ ಅವರಿಗೆ ನಿರ್ದೇಶನ ಬೇಕು, ಅಷ್ಟೆ' ಎಂದು ಅವರು ಹೇಳಿದರು.

2025ರ ನವೆಂಬರ್ 12ರಂದು, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, ತೋಟ ಕಾರ್ಮಿಕರ ಕಾಯ್ದೆ, ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ, ಮೋಟಾರು ಸಾರಿಗೆ ಕಾಯ್ದೆ ಅಡಿಯಲ್ಲಿ ನೋಂದಣಿ ಆಗಿರುವ ಕೈಗಾರಿಕೆಗಳು ಮತ್ತು ಸಂಸ್ಥೆಗಳೂ ಸೇರಿದಂತೆ ಎಲ್ಲ ವಲಯಗಳಲ್ಲಿ ಕೆಲಸ ಮಾಡುತ್ತಿರುವ 18 ರಿಂದ 52 ವರ್ಷದ ಎಲ್ಲ ಕಾಯಂ, ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ತಿಂಗಳಿಗೆ ಒಂದು ದಿನದಂತೆ ವರ್ಷಕ್ಕೆ 12 ಮುಟ್ಟಿನ ರಜೆಯನ್ನು ನೀಡುವಂತೆ ಎಲ್ಲ ಉದ್ಯೋಗದಾತರಿಗೂ ಸೂಚಿಸಲಾಗಿದೆ.

DCM DK Shivakumar
ಕಡ್ಡಾಯ ಮುಟ್ಟಿನ ರಜೆ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ಸ್ ಅಸೋಸಿಯೇಷನ್!

ಈ ರಜೆ ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣಪತ್ರದ ಅಗತ್ಯವಿಲ್ಲ ಮತ್ತು ಅದನ್ನು ಇತರ ರಜೆಗಳೊಂದಿಗೆ ಸೇರಿಸಬಾರದು.

ವಿವಿಧ ವಲಯಗಳ ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಿಗೆ ಒಂದರಂತೆ ವರ್ಷಕ್ಕೆ 12 ಮುಟ್ಟಿನ ರಜೆಯನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಇತ್ತೀಚಿನ ನಿರ್ದೇಶನವನ್ನು ಪ್ರಶ್ನಿಸಿ ಬೆಂಗಳೂರು ಹೋಟೆಲ್‌ಗಳ ಸಂಘ (ಬಿಎಚ್‌ಎ) ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಸರ್ಕಾರವು ತನ್ನ ಮಹಿಳಾ ಉದ್ಯೋಗಿಗಳಿಗೆ ಈ ನೀತಿಯನ್ನು ನೀಡಿಲ್ಲ. ಹೀಗಾಗಿ, ಇದು ತಾರತಮ್ಯದಿಂದ ಕೂಡಿದೆ ಎಂದು ಹೇಳಿತ್ತು. ಇದಾದ ನಂತರ, ರಾಜ್ಯ ಸರ್ಕಾರವು ತನ್ನ ಉದ್ಯೋಗಿಗಳಿಗೂ ಮುಟ್ಟಿನ ರಜೆಯನ್ನು ವಿಸ್ತರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com