

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿಯ ಕದಂಬ ನೌಕಾನೆಲೆ ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಇದು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.
ನೌಕಾನೆಲೆ ವಸತಿ ಗೃಹದ ಬಳಿಕ ಚಿರತೆ ಕಾಣಿಸಿಕೊಂಡಿದ್ದು, ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳನ್ನು ಮನೆಯೊಳಗೆ ಇರುವಂತೆ ಎಚ್ಚರಿಕೆ ನೀಡಲಾಗಿದೆ.
ವಿಡಿಯೋದಲ್ಲಿ ಆರ್ಗಾದಲ್ಲಿರುವ ನೌಕಾಪಡೆ ಸಿಬ್ಬಂದಿ ವಸತಿ ನಿಲಯದ ಬಳಿ ಚಿರತೆ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ,
ಈ ಹಿಂದೆ ಕೂಡ ಇದೇ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಆದರೆ, ಯಾವುದೇ ಆಪಾಯಗಳು ಸಂಭವಿಸಿರಲಿಲ್ಲ. ಚಿರತೆಯ ಜೊತೆಗೆ ಕಾಡುಹಂದಿಗಳು ಮತ್ತು ಇತರ ಪ್ರಾಣಿಗಳು ಕೂಡ ಕಾಣಿಸಿಕೊಂಡಿತ್ತು.
ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ, ಸ್ಥಳೀಯ ನಿವಾಸಿಗಳಿಗೆ ಮನೆಯೊಳಗೆ ಇರುವಂತೆ ಸಲಹೆ ನೀಡಿದೆ. ಸ್ಥಳದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳು ಎಚ್ಚರಿಕೆಯಿಂದಿರಬೇಕು ಎಂದು ಹೇಳಿದ್ದಾರೆ.
Advertisement