ರಾಜ್ಯ

ಕಾರ್ಟಿಯರ್‌ ವಾಚ್ ರಾಮಾಯಣ: ನಾನು ಪಾರದರ್ಶಕ ವ್ಯಕ್ತಿ- ನಾರಾಯಣಸ್ವಾಮಿ; ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್- DKS!

ಮಿಸ್ಟರ್ ನಾರಾಯಣಸ್ವಾಮಿ. ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್, ಜವಾಬ್ದಾರಿಯುತ ಸ್ಥಾನದಲ್ಲಿರೋ ನೀವು ನಿಮ್ಮ ಬಾಯಿ ತೆವಲಿಗಾಗಿ ಮನಸ್ಸಿಗೆ ಬಂದಂತೆ ಸುಳ್ಳು ಹೇಳಬಾರದು. ಇದು ನಿಮಗೆ ಘನತೆ ತರುವುದಿಲ್ಲ ಎಂದಿದ್ದಾರೆ.

ಕಾರ್ಟಿಯರ್‌ ವಾಚ್ ರಾಮಾಯಣ: ನಾನು ಪಾರದರ್ಶಕ ವ್ಯಕ್ತಿ- ನಾರಾಯಣಸ್ವಾಮಿ; ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್- DKS!
ಡಿ.ಕೆ ಶಿವಕುಮಾರ್
Published On :

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾರ್ಟಿಯರ್‌ ಕಂಪನಿ ವಾಚ್‌ ಧರಿಸಿದ್ದು, ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲೂ ಮಾಹಿತಿ ನೀಡಿಲ್ಲ ಎಂದು ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದರು.

ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಮಿಸ್ಟರ್ ನಾರಾಯಣಸ್ವಾಮಿ. ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್, ಜವಾಬ್ದಾರಿಯುತ ಸ್ಥಾನದಲ್ಲಿರೋ ನೀವು ನಿಮ್ಮ ಬಾಯಿ ತೆವಲಿಗಾಗಿ ಮನಸ್ಸಿಗೆ ಬಂದಂತೆ ಸುಳ್ಳು ಹೇಳಬಾರದು. ಇದು ನಿಮಗೆ ಘನತೆ ತರುವುದಿಲ್ಲ ಎಂದಿದ್ದಾರೆ.

ನಾನು ಪಾರದರ್ಶಕ ವ್ಯಕ್ತಿ. ಏನನ್ನೂ ಮುಚ್ಚಿಟ್ಟುಕೊಳ್ಳಬಾರದು ಅಂತಲೇ ನಿಜ ಹೇಳಿದ್ದೇನೆ. ನನಗೆ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ನಮಗೆ ಇಷ್ಟವಾದ ವಾಚ್ ಕಟ್ಟಿಕೊಳ್ಳುವ ಯೋಗ್ಯತೆ ಇಲ್ಲವೇ? ಹಕ್ಕು ಇಲ್ಲವೇ..? ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ. ನಿಮಗಿರೋ ಸಾಂವಿಧಾನಿಕ ಅಧಿಕಾರ, ಜವಾಬ್ದಾರಿಯನ್ನು ವಿವೇಕದಿಂದ ನಿರ್ವಹಿಸಿ. ಅವಿವೇಕಿಯಂತೆ ಆಡಬೇಡಿ ಎಂದು ಲೇವಡಿ ಮಾಡಿದ್ದಾರೆ. ಬೇಕಿದ್ದರೆ ಲೋಕಾಯುಕ್ತ ಕಚೇರಿಗೆ ಹೋಗಿ ನನ್ನ ಅಫಿಡವಿಟ್ ಚೆಕ್ ಮಾಡಿಕೊಳ್ಳಿ ಎಂದು ಎಕ್ಸ್ ಖಾತೆಯಲ್ಲಿ ದಾಖಲೆಗಳನ್ನು ಲಗತ್ತಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.