ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಮರ್ಡರ್​​ ಕೇಸ್: ಬಜರಂಗದಳ ಕಾರ್ಯಕರ್ತ ಬಂಧನ

ಪ್ರಕರಣದಲ್ಲಿ ಮಿಥುನ್ ಪಾತ್ರ ಇರುವುದು ದೃಢಪಟ್ಟ ಹಿನ್ನೆಲೆ ಬಜರಂಗದಳ ಕಾರ್ಯಕರ್ತ ಮಿಥಿನ್ ಎಂಬಾತನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು. ಚಿಕ್ಕಮಗಳೂರು ನಗರದ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.
Ganesh gowda
ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ
Updated on

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತ ಗಣೇಶ್​ ಕೊಲೆ ಪ್ರಕರಣದಲ್ಲಿ ಬಜರಂಗ ದಳ ಕಾರ್ಯಕರ್ತನೊಬ್ಬನನ್ನು ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

ಗಣೇಶ್ ಗೌಡ(38) ಕೊಲೆಯಾದವರು. ಇವರು ಸಖರಾಯಪಟ್ಟಣ ಗ್ರಾಪಂ ಸದಸ್ಯರಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಸಂಜಯ್, ಭೂಷಣ್, ಮಿಥುನ್ ಎಂಬವರು ಸೇರಿದಂತೆ ಬಿಜೆಪಿ, ಬಜರಂಗದಳದ ಐವರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಇದೀಗ ಪ್ರಕರಣದಲ್ಲಿ ಮಿಥುನ್ ಪಾತ್ರ ಇರುವುದು ದೃಢಪಟ್ಟ ಹಿನ್ನೆಲೆ ಆತನನ್ನು ಬಂಧಿಸಲಾಗಿದ್ದು, ಚಿಕ್ಕಮಗಳೂರು ನಗರದ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.

ಗಣೇಶ್ ಹತ್ಯೆಯಲ್ಲಿ‌ ಎ6 ಆಗಿರುವ ಮಿಥುನ್‌ ಎ1 ಸಂಜಯ್ ಸ್ನೇಹಿತನಾಗಿದ್ದಾನೆ. ಈತ ಆರ್'ಎಸ್ಎಸ್ ಮತ್ತು ಬಜರಂಗದಳದಲ್ಲಿ‌ ಸಕ್ರಿಯ ಕಾರ್ಯಕರ್ತನಾಗಿದ್ದಾನೆಂದು ಹೇಳಲಾಗುತ್ತಿದೆ.

Ganesh gowda
ಚಿಕ್ಕಮಗಳೂರು: ಕಡೂರಿನಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ಗಲಾಟೆ; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಪ್ರಕರಣ ಸಂಬಂಧ ಎ1 ಸಂಜಯ್ ಮತ್ತು ಎ3 ನಾಗಭೂಷಣ್​​ನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಎ2 ನಿತಿನ್, ಎ4 ದರ್ಶನ್ ಹಾಗೂ ಅಜಯ್​​​​ಗಾಗಿ ಹುಡುಕಾಟ ಮುಂದುವರಿದಿದೆ. ಗಣೇಶ್ ಹತ್ಯೆ ಬಳಿಕ ಈ ಮೂವರು ಆರೋಪಿಗಳು ‌ತಲೆಮರೆಸಿಕೊಂಡಿದ್ದಾರೆ.

ಸಖರಾಯಪಟ್ಟಣದಲ್ಲಿ ಎರಡು ದಿನಗಳ ಹಿಂದೆ ದತ್ತ ಜಯಂತಿಯ ಬ್ಯಾನರ್ ತೆರವು ವಿಚಾರವಾಗಿ ಎರಡು ತಂಡಗಳ ಮಧ್ಯೆ ಗಲಾಟೆ ನಡೆದಿತ್ತು.

ಇದೇ ವಿಚಾರವಾಗಿ ಈ ತಂಡಗಳ ಮಧ್ಯೆ ಶುಕ್ರವಾರ ರಾತ್ರಿಯೂ ಸಖರಾಯಪಟ್ಟಣ ಬಾರ್ ಬಳಿ ಗಲಾಟೆ ನಡೆದಿತ್ತು. ಇದಾಗಿ ಅರ್ಧ ಗಂಟೆಯ ಬಳಿಕ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ಗಣೇಶ್ ಗೌಡರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

ಕಲ್ಮರಡಿ ಮಠದ ರಸ್ತೆಯಲ್ಲಿ ಗಣೇಶ್ ಕಾರಿನಲ್ಲಿ ತೆರಳುತ್ತಿದ್ದಾಗ ಬೈಕಿನಲ್ಲಿ ಅಡ್ಡಗಟ್ಟಿದ ಎಂಟು ಮಂದಿಯಿದ್ದ ಹಂತಕರ ತಂಡ ಅವರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ದಾಳಿ ಮಾಡಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದರು. ಘಟನೆ ಬಳಿಕ ಆರೋಪಿಗಳ ಪತ್ತೆಗೆ ಚಿಕ್ಕಮಗಳೂರು ಎಸ್​​​ಪಿ ವಿಕ್ರಮ್ ನೇತೃತ್ವದಲ್ಲಿ 4 ತಂಡ ರಚಿಸಿ ಶೋಧ ನಡೆಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com