

ಬೆಂಗಳೂರು: ಸಿಎಂ ಕುರ್ಚಿ ಕದನದ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ಶಾಕ್ ವೊಂದು ಎದುರಾಗಿದೆ. ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ ಪ್ರಶ್ನಿಸಿ ಶಂಕರ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ಅರ್ಜಿ ವಜಾಗೊಳಿಸಿತ್ತು. ನಂತರ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಅರ್ಜಿಯಲ್ಲಿ ಜನತೆಗೆ ಹಲವಾರು ಗ್ಯಾರಂಟಿಗಳ ಆಮಿಷವನ್ನು ಒಡ್ಡುವ ಮೂಲಕ ಸಿದ್ದರಾಮಯ್ಯನವರು 2023ರ ಚುನಾವಣೆಯಲ್ಲಿ ಗೆದ್ದಿದ್ದಾರೆ. ಮತದಾರರಿಗೆ ಆಮಿಷ ನೀಡಿ ಮತದಾರರನ್ನು ಆಕರ್ಷಿಸುವುದು ಚುನಾವಣಾ ನಿಯಮಗಳಿಗೆ ವಿರುದ್ಧವಾದದ್ದು. ಆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಮನವಿ ಮಾಡಿದ್ದರು.
ಈ ಅರ್ಜಿಯನ್ನು ಸುಪ್ರೀಂಕೋರ್ಟ್ ನಲ್ಲಿ ನ್ಯಾ.ವಿಕ್ರಮನಾಥ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ಕೈಗೆತ್ತಿಕೊಂಡಿದ್ದು, ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದೆ.
Advertisement