

ಬೆಂಗಳೂರು: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ನಿರಾಕರಿಸಿದೆ.
ಈ ಸಂಬಂಧ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿನಯ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಕಾಯ್ದಿರಿಸಿದ್ದ ಆದೇಶವನ್ನು ಶಾಸಕರ-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಪ್ರಕಟಿಸಿದರು.
ಏನಿದು ಪ್ರಕರಣ: ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15 ರಂದು ಯೋಗೀಶ್ ಗೌಡ ಗೌಡರ್ ಕೊಲೆ ನಡೆದಿತ್ತು.
ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ವಿನಯ ಕುಲಕರ್ಣಿ ಅವರು 2025ರ ಜೂನ್ 13 ರಿಂದ ನ್ಯಾಯಾಂಗ ಬಂಧನದಲ್ಲಿದ್ದು, ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ.
Advertisement