

ಹಾಸನ: ಹಾಸನದಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಆತನ ಶವದ ಮುಂದೆ ಆರೋಪಿಯೂ ಸೆಲ್ಫಿ ವಿಡಿಯೋ ಮಾಡಿ ತಾನೇ ಕೊಲೆ ಮಾಡಿದ್ದಾಗಿ ಹೇಳಿದ್ದಾನೆ. ಬಿಟ್ಟಗೌಡನಹಳ್ಳಿ ಬಳಿ ಹಾಸನದ ಹೂವಿನಹಳ್ಳಿ ಕಾವಲು ಗ್ರಾಮದ ನಿವಾಸಿ 22 ವರ್ಷದ ಮೆಕ್ಯಾನಿಕ್ ಕೀರ್ತಿ ಎಂಬಾತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಶವದೊಂದಿಗೆ ಸೆಲ್ಫಿ ವಿಡಿಯೋ ಮಾಡಿದ ಆರೋಪಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ. ಈ ವಿಡಿಯೋ ಆಧರಿಸಿ ಸ್ಥಳಕ್ಕೆ ಎಎಸ್‌ಪಿ ಭೇಟಿ ಪರಿಶೀಲನೆ ನಡೆಸಿದ್ದು, ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.
Advertisement