

ಬೆಂಗಳೂರು: 2019ರ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ IPS ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ರದ್ದುಗೊಳಿಸಿದ್ದು ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಅಲೋಕ್ ಕುಮಾರ್ಗೆ ಎಡಿಜಿಪಿಯಿಂದ ಡಿಜಿಪಿಯಾಗಿ ಬಡ್ತಿ ನೀಡಿದೆ. ಕಾರಾಗೃಹ ಇಲಾಖೆಗೆ ಅಲೋಕ್ ಕುಮಾರ್ ಅವರನ್ನು ಡಿಜಿಪಿಯಾಗಿ ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ, ಕಾರಾಗೃಹ ಇಲಾಖೆಯ ಎಡಿಜಿಪಿಯಾಗಿದ್ದ ಬಿ ದಯಾನಂದ್ ಅವರನ್ನು ಈಗ ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿಯಾಗಿ ವರ್ಗಾವಣೆ ಮಾಡಿದೆ. ಫೋನ್ ಟ್ಯಾಪಿಂಗ್ ಹಗರಣ ಪ್ರಕರಣದಲ್ಲಿ ಅಲೋಕ್ ಕುಮಾರ್ ಸೇರಿ ಕೆಲ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಇಲಾಖಾ ತನಿಖೆಗೆ ಆದೇಶ ಹೊರಡಿಸಿತ್ತು. ಅಂದು ಅಲೋಕ್ ಕುಮಾರ್ ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದರು. ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದ ಸಿಬಿಐ ಬಿ ರಿಪೋರ್ಟ್ ಸಲ್ಲಿಸಿತ್ತು. ಆದರೆ 2025ರ ಮೇ ನಲ್ಲಿ ರಾಜ್ಯ ಸರ್ಕಾರ ಇಲಾಖಾ ತನಿಖೆಗೆ ಆದೇಶಿಸಿತ್ತು. ಇದೀಗ 8 ತಿಂಗಳ ಹೋರಾಟಕ್ಕೆ ಜಯ ಸಿಕ್ಕಿದೆ.
Advertisement