

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬೆತ್ತಲೆ ಫೋಟೋ ವೈರಲ್ ಮಾಡುವ ಬೆದರಿಕೆ ಹೆದರಿದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರು ಹೊರವಲಯದ ಹೆಸರುಘಟ್ಟದ ಶಾಂತಿನಗರದಲ್ಲಿ ಈ ಘಟನೆ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಎಂಬಿಎ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ 25 ವರ್ಷದ ಜಗನ್ ಎಂಬಾತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಗನ್ ಡೆತ್ ನೋಟ್ ನಲ್ಲಿ ಮೂರು ಮೊಬೈಲ್ ನಂಬರ್ ಗಳನ್ನು ಬರೆದಿಟ್ಟಿದ್ದನು. ಇದನ್ನು ಪರಿಶೀಲಿಸಿದ ಪೊಲೀಸರಿಗೆ ಫೇಕ್ ವಿಡಿಯೋ ಕಾಲ್ ನಲ್ಲಿ ಯುವಕ 25 ಸಾವಿರ ರೂಪಾಯಿ ಹಣ ಕಳೆದುಕೊಂಡಿದ್ದಾನೆ. ಅಲ್ಲದೆ ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ಹಾಗೂ ವಿಡಿಯೋ ವೈರಲ್ ಮಾಡುವ ಬೆದರಿಕೆ ಹಾಕಿರುವುದು ಪತ್ತೆಯಾಗಿದೆ.
Advertisement