

ಬೆಳಗಾವಿ: ವೀರೇಂದ್ರ ಹೆಗ್ಗಡೆ ಅವರ ಕಷ್ಟಕಾಲದಲ್ಲಿ ನಾನು ತೆಗೆದುಕೊಂಡ ಒಂದು ನಿರ್ಧಾರದಿಂದ ಇಡೀ ದೇಶದ ಜೈನ ಸಮುದಾಯದವರು ನೀವು ಒಳ್ಳೆ ಕೆಲಸ ಮಾಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಆಚಾರ್ಯರತ್ನ ಶ್ರೀ 108 ಬಾಹುಬಲಿ ಮುನಿಮಹಾರಾಜರ 94 ನೇ ಜನ್ಮಜಯಂತಿ ಮಹೋತ್ಸವದಲ್ಲಿ ಬುಧವಾರ ಭಾಗವಹಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು. ವೀರೇಂದ್ರ ಹೆಗಡೆ ಅವರ ಮೇಲೆ ಯಾವ ರೀತಿ ಷಡ್ಯಂತ್ರ ಆಯಿತು. ಆಗ ಅವರ ಕಷ್ಟಕಾಲದಲ್ಲಿ ನಾವು ತೆಗೆದುಕೊಂಡ ನಿರ್ಧಾರವನ್ನು ರಾಷ್ಟ್ರೀಯ, ರಾಜ್ಯ ಮಾಧ್ಯಮಗಳು ಹಾಗೂ ಅನೇಕ ನಾಯಕರುಗಳು ಪ್ರಶ್ನೆ ಮಾಡಿದರು.
ನಾನು ಯಾವ ಒತ್ತಡಕ್ಕೂ ಮಣಿಯುವುದಿಲ್ಲ, ನನ್ನ ಅನುಭವ ಹಾಗೂ ಏನನ್ನು ತಿಳಿದಿದ್ದೇನೋ ಅದನ್ನು ಹೇಳಿದ್ದೇನೆ ಎಂದು ಹೇಳಿದ್ದೆ. ದೂರದಾರರೇ ಆರೋಪಿಗಳಾಗಿ ಉಲ್ಲೇಖಿಸಿರುವ ಚಾರ್ಜ್ ಶೀಟ್ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದ್ದರು. ನಾನು ಏನು ಹೇಳಬೇಕೋ ಅದನ್ನು ನೀವೇ ವ್ಯಾಖ್ಯಾನ ಮಾಡಿ ಎಂದಷ್ಟೇ ಉತ್ತರಿಸಿದ್ದೇನೆ” ಎಂದರು.
ಧರ್ಮಸ್ಥಳ ವಿಷಯದಲ್ಲಿ ಸತ್ಯ ಹೊರ ಬಂದಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ನಡುವಿನ ಆಳ ಭಿನ್ನಾಭಿಪ್ರಾಯಗಳ ಕಾರಣಕ್ಕೆ ಈ ಪಿತೂರಿ ನಡೆದಿದೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದರು. ನನಗೆ ಧರ್ಮಸ್ಥಳದ ಇತಿಹಾಸ ಗೊತ್ತು. ಅವರು ಯಾರೂ ಈ ರೀತಿ ಮಾಡುವುದಿಲ್ಲ ಎನ್ನುವುದೂ ಗೊತ್ತಿತ್ತು. ಹಾಗಾಗಿ, ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ನಡೆದಿದೆ ಎಂದು ನಾನು ಧೈರ್ಯದಿಂದ ಹೇಳಿದ್ದೆಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.
ಶಾಂತಿ, ಸಹನೆ, ಅಹಿಂಸೆ, ತ್ಯಾಗದ ಸಂಕೇತ ಜೈನ ಸಮುದಾಯದವರು. ನಿಮಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಿದ್ದೂ ಸಹ ಕಾಂಗ್ರೆಸ್ ಸರ್ಕಾರ. ಜೈನ ಸಮುದಾಯದ ಜೊತೆ ಯಾವಾಗಲೂ ಇದ್ದೇನೆ ಎಂದು ಹೇಳುತ್ತೇನೆ. ಜೈನರ ಪದ್ದತಿ, ಸಂಸ್ಕೃತಿಯನ್ನು ಉಳಿಸಿ, ಬೆಳೆಸಿಕೊಂಡು ಬರುತ್ತಿದ್ದೀರಿ. ಮಾನ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎನ್ನುವ ಮಾತಿನ ಮೇಲೆ ನಂಬಿಕೆ ಇಡೋಣ” ಎಂದರು.
ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ, ದೇವನೊಬ್ಬ ನಾಮ ಹಲವು. ಈ ವಿಚಾರದಲ್ಲಿ ನಾವು ನಂಬಿಕೆಯನ್ನಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆಎಂದರು
Advertisement