

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಜಾಬಂದಿ ಹಾಗೂ ವಿಚಾರಣಾಧೀನ ಕೈದಿಗಳಿಗೆ ನೀಡಲಾಗಿದ್ದ ವಿಶೇಷ ಆತಿಥ್ಯಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ, ಬೆಂಗಳೂರು ಕೇಂದ್ರ ಕಾರಾಗೃಹದ ಅಧಿಕಾರಿಗಳು ಜೈಲು ಆವರಣದಲ್ಲಿ ಹಲವು ಬಾರಿ ಶೋಧ ನಡೆಸುತ್ತಿದ್ದಾರೆ.
ಅಧಿಕಾರಿಗಳು ಮಂಗಳವಾರ ಜೈಲಿನ ಮೇಲೆ ದಾಳಿ ನಡೆಸಿ, ಹಲವಾರು ಬ್ಯಾರಕ್‌ಗಳಲ್ಲಿ 14 ಮೊಬೈಲ್ ಫೋನ್‌ಗಳು, ಒಂಬತ್ತು ಸಿಮ್ ಕಾರ್ಡ್‌ಗಳು, ಐದು ಚಾರ್ಜರ್‌ಗಳು, 10 ಚೂಪಾದ ವಸ್ತುಗಳು ಮತ್ತು ಎರಡು ಇಯರ್‌ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಇದರೊಂದಿಗೆ, ಕಳೆದ ಹದಿನೈದು ದಿನಗಳಲ್ಲಿ ಅಧಿಕಾರಿಗಳು 67 ಮೊಬೈಲ್ ಫೋನ್‌ಗಳು, 48 ಸಿಮ್ ಕಾರ್ಡ್‌ಗಳು ಮತ್ತು 64,880 ರೂ. ನಗದು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
60 ಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳುವುದು ಜೈಲಿನಲ್ಲಿ ಗಂಭೀರ ಭದ್ರತಾ ಲೋಪದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇತ್ತೀಚೆಗೆ, ಜೈಲಿಗೆ ಮಾದಕ ದ್ರವ್ಯ ಮತ್ತು ಮೊಬೈಲ್ ಫೋನ್‌ಗಳನ್ನು ಕಳ್ಳಸಾಗಣೆ ಮಾಡುತ್ತಿರುವ ಕೆಲವು ಘಟನೆಗಳು ಸಹ ಬೆಳಕಿಗೆ ಬಂದಿವೆ.
ಪತ್ರಿಕಾ ಪ್ರಕಟಣೆಯ ಪ್ರಕಾರ, ನವೆಂಬರ್ 26 ರಿಂದ ಇಲ್ಲಿಯವರೆಗೆ, ಜೈಲು ಅಧಿಕಾರಿಗಳು 67 ಮೊಬೈಲ್ ಫೋನ್‌ಗಳು, 14 ಚಾರ್ಜರ್‌ಗಳು, 48 ಸಿಮ್ ಕಾರ್ಡ್‌ಗಳು, 10 ಇಯರ್‌ಫೋನ್‌ಗಳು, 64,480 ರೂ. ನಗದು, 13 ಚೂಪಾದ ವಸ್ತುಗಳು ಮತ್ತು ಸಿಗರೇಟ್ ಸೇರಿದಂತೆ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿಯವರೆಗೆ ಆರು ಎಫ್‌ಐಆರ್‌ಗಳು ದಾಖಲಾಗಿವೆ.
Advertisement