ಬಗೆದಷ್ಟು ಹೊರಬರುತ್ತಿದೆ ಮುಡಾ ಹಗರಣ: 700 ಕೋಟಿ ಮೌಲ್ಯದ ಅಕ್ರಮ ನಿವೇಶನಗಳ ಮಾರಾಟ; ಮಾಜಿ ಆಯುಕ್ತರಿಂದ 22 ಕೋಟಿ ಲಂಚ ಸ್ವೀಕಾರ!

2002 ರ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ನಡೆಸಲಾದ ತನಿಖೆಯಲ್ಲಿ, ಸುಮಾರು 700 ಕೋಟಿ ರೂ. ಮೌಲ್ಯದ 1,095 ಅಕ್ರಮ ನಿವೇಶನಗಳನ್ನು ಮಾರಾಟ ಮಾಡಲಾಗಿದೆ.
MUDA
ಮುಡಾ ಕಚೇರಿ
Updated on

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಲವು ಕಾನೂನು ಬಾಹಿರ ಚಟುವಟಿಕೆಗಳು ನಡೆದಿದ್ದು ಬಗೆದಷ್ಟು ಹಲವು ಅವ್ಯವಹಾರಗಳು ಬೆಳಿಕಿಗೆ ಬರುತ್ತಿವೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ತಮ್ಮ ಅಧಿಕಾರಾವಧಿಯಲ್ಲಿ 140 ಕೋಟಿ ರೂ. ಮೌಲ್ಯದ 283 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡುವ ಮೂಲಕ 22.47 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

2002 ರ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ನಡೆಸಲಾದ ತನಿಖೆಯಲ್ಲಿ, ಸುಮಾರು 700 ಕೋಟಿ ರೂ. ಮೌಲ್ಯದ 1,095 ಅಕ್ರಮ ನಿವೇಶನಗಳನ್ನು ಮಾರಾಟ ಮಾಡಲಾಗಿದೆ. 1,095 ನಿವೇಶನಗಳ ಪಟ್ಟಿಯನ್ನು ಮುಡಾ ಆಯುಕ್ತರು ಪರಿಶೀಲನೆ ಸಮಯದಲ್ಲಿ ಇಡಿಗೆ ಸಲ್ಲಿಸಿದ್ದಾರೆ.

ದಿನೇಶ್ ಕುಮಾರ್ ಅವರನ್ನು 'ಹಗರಣಗಳ ಸೂತ್ರಧಾರಿ'ಗಳಲ್ಲಿ ಒಬ್ಬರು ಎಂದು ಇಡಿ ಹೇಳಿದೆ. ಅಕ್ರಮ ಹಂಚಿಕೆ ಮಾಡಿದ್ದಕ್ಕಾಗಿ ಅವರು ನಗದು, ಚರ ಮತ್ತು ಸ್ಥಿರ ಆಸ್ತಿಗಳ ರೂಪದಲ್ಲಿ ಪ್ರತಿಫಲವನ್ನು ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಅವ್ಯವಹಾರದ ಆದಾಯ ಸಂಪಾದನೆ ಮರೆಮಾಚುವಿಕೆ ಇತ್ಯಾದಿಗಳಿಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಉದ್ದೇಶಪೂರ್ವಕವಾಗಿ ಸಹಾಯ ಮಾಡಲು ಮಾಜಿ ಆಯುಕ್ತರು ಪ್ರಯತ್ನಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ದಿನೇಶ್ ಕುಮಾರ್ ಪಡೆದ 22.47 ಕೋಟಿ ರೂ. ಲಂಚದಲ್ಲಿ 34.65 ಲಕ್ಷ ರೂ. ನಗದು ಸಂಗ್ರಹಿಸಿದ್ದಾರೆ, ಹೆಚ್ಚಿನ ಭದ್ರತಾ ಬಾಂಡ್ ಪೇಪರ್‌ಗಳನ್ನು ದುರುಪಯೋಗಪಡಿಸಿಕೊಂಡು 8.28 ಕೋಟಿ ರೂ. ಗಳಿಸಿದ್ದಾರೆ, ಚಾಮುಂಡೇಶ್ವರಿ ನಗರ ಸರ್ವೋದಯ ಸಂಘದ ಸದಸ್ಯರ ಮೂಲಕ 5.86 ಕೋಟಿ ರೂ., ಅಬ್ದುಲ್ ವಹೀದ್ ಅವರಿಂದ 3.62 ಕೋಟಿ ರೂ., ಕ್ಯಾಥೆಡ್ರಲ್ ಪ್ಯಾರಿಷ್ ಸೊಸೈಟಿಯಿಂದ 1.70 ಕೋಟಿ ರೂ., ನಿಂಗಮ್ಮ ಅವರಿಂದ 1.13 ಕೋಟಿ ರೂ., ಜೆಎಸ್‌ಎಸ್ ಮಹಾವಿದ್ಯಾಪೀಠ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದಿಂದ 1.02 ಕೋಟಿ ರೂ. ಮತ್ತು ನಿಂಗಮ್ಮ ಅವರಿಂದ 49 ಲಕ್ಷ ರೂ.ಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಪರಿಹಾರ ನಿವೇಶನಗಳಿಗೆ 'ರಿಟರ್ನ್ಸ್' ಆಗಿ ಪಡೆದಿದ್ದಾರೆ ಎಂದು ED ಅಂದಾಜಿಸಿದೆ.

MUDA
MUDA Scam: ಮುಡಾ ಮಾಜಿ ಅಧಿಕಾರಿ ದಿನೇಶ್ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ದೂರು ದಾಖಲು

ಈ ಅಕ್ರಮದಿಂದ ಬಂದ ಆದಾಯವನ್ನು ರವಾನಿಸಲು ಕುಮಾರ್ ಸಂಕೀರ್ಣ ವಿಧಾನವನ್ನು ಬಳಸಿದ್ದಾರೆ ಎಂದು ಕರ್ನಾಟಕ ಆಡಳಿತ ಸೇವೆಗಳ ಅಧಿಕಾರಿ ಕುಮಾರ್ ತಿಳಿಸಿದ್ದಾರೆ. ಕುಮಾರ್ ಮೇ 4, 2022 ರಿಂದ ಜುಲೈ 2, 2024 ರವರೆಗೆ ಸುಮಾರು 26 ತಿಂಗಳುಗಳ ಕಾಲ ಮುಡಾ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.

ಅಕ್ರಮ ನಿವೇಶನ ಹಂಚಿಕೆ ಮತ್ತು ಅವುಗಳ ಮಾರಾಟದ ಮೂಲಕ ಬಂದ ಅನೈತಿಕ ಆದಾಯವನ್ನು ಹಲವಾರು ರಿಯಲ್ ಎಸ್ಟೇಟ್ ಉದ್ಯಮಿಗಳು ಅಥವಾ ದಲ್ಲಾಳಿಗಳು ಪಡೆದಿದ್ದಾರೆ ಎಂದು ಇಡಿ ಪ್ರಾಥಮಿಕವಾಗಿ ನಡೆಸಿದ ತನಿಖೆಯಿಂದ ಬಹಿರಂಗವಾಗಿದೆ.

ಅವ್ಯವಹಾರದ ಒಟ್ಟಾರೆ ಆದಾಯವನ್ನು ಪತ್ತೆಹಚ್ಚಲು ಕುಮಾರ್ ಮತ್ತು ಭಾಗಿಯಾಗಿರುವ ಇತರ ವ್ಯಕ್ತಿಗಳ ಕೈಯಲ್ಲಿ ಹಣ ವರ್ಗಾವಣೆಯ ಅಪರಾಧದ ಬಗ್ಗೆ ಪುರಾವೆಗಳನ್ನು ಸಂಗ್ರಹಿಸಲು ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಬಿ.ಎಂ., ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ಮತ್ತು ಇತರರ ವಿರುದ್ಧ ದಾಖಲಿಸಿದ್ದಾರೆ. ಎಫ್‌ಐಆರ್‌ನಲ್ಲಿ ಐಪಿಸಿ, ಭ್ರಷ್ಟಾಚಾರ ತಡೆ ಕಾಯ್ದೆ, ಬೇನಾಮಿ ವಹಿವಾಟು ಕಾಯ್ದೆ ಮತ್ತು ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ದೂರು ದಾಖಲಿಸಿದ ನಂತರ, ಜಾರಿ ನಿರ್ದೇಶನಾಲಯವು ದಿನೇಶ್ ಕುಮಾರ್ ಅವರನ್ನು ಬಂಧಿಸಿದೆ. ಅವರು ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com