

ಬೆಂಗಳೂರು: ಅಳಿವಿನಂಚಿನಲ್ಲಿರುವ ಕೋತಿ ಪ್ರಭೇದವಾದ ಎರಡು ರೆಡ್-ಶ್ಯಾಂಕ್ಡ್ ಡೌಕ್‌ಗಳನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬ್ಯಾಂಕಾಕ್‌ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನನ್ನು ಬಂಧಿಸಲಾಗಿದೆ ಮತ್ತು ಪ್ರಾಣಿಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಡಿಸೆಂಬರ್ 10 ರಂದು ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದಿರುವ ಅವರು, ಬಂಧಿತ ವ್ಯಕ್ತಿಯ ಗುರುತನ್ನು ಬಹಿರಂಗಪಡಿಸಿಲ್ಲ.
ಅಳಿವಿನಂಚಿನಲ್ಲಿರುವ ಎರಡು ರೆಡ್-ಶ್ಯಾಂಕ್ಡ್ ಡೌಕ್ ಕೋತಿಗಳನ್ನು 'ತನ್ನ ಚೆಕ್-ಇನ್ ಬ್ಯಾಗೇಜ್‌ನಲ್ಲಿ ಮರೆಮಾಡಿಕೊಂಡು ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕನನ್ನು ತಡೆದು, ಪರಿಶೀಲನೆ ನಡೆಸಲಾಯಿತು' ಎಂದು ಬೆಂಗಳೂರು ಕಸ್ಟಮ್ಸ್ 'X'ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ.
ಪ್ರಾಣಿಗಳನ್ನು ರಕ್ಷಿಸಲಾಯಿತು ಮತ್ತು ಪ್ರಯಾಣಿಕನನ್ನು ಬಂಧಿಸಲಾಯಿತು ಎಂದು ಅದು ಹೇಳಿದೆ.
Advertisement