

ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಕನಕಪುರ ರಸ್ತೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೆ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಗಣೇಶ್(52), ನಾಗೇಂದ್ರ (36), ಪೇಂಟರ್ ಕೆಲಸಗಾರ ಮತ್ತು ಖಾಸಗಿ ಕಂಪನಿ ಉದ್ಯೋಗಿ ಮನೋಜ್(23) ಎಂದು ಗುರುತಿಸಿಲಾಗಿದ್ದು, ಗಾಯಗೊಂಡಿರುವ ಖಾಸಗಿ ಕಂಪನಿ ಉದ್ಯೋಗಿ ಲೋಕೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಜೆ 7 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಮನೋಜ್ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದ ನಾಗೇಂದ್ರ, ಲೋಕೇಶ್ ಮತ್ತು ಗಣೇಶ್ ಪ್ರಯಾಣಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಗೇಂದ್ರ ಮತ್ತು ಮನೋಜ್ ಕನಕಪುರದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದರೆ, ಲೋಕೇಶ್ ಮತ್ತು ಗಣೇಶ್ ಕನಕಪುರ ಕಡೆಗೆ ಹೋಗುತ್ತಿದ್ದರು. ಗಣೇಶ್, ನಾಗೇಂದ್ರ ಮತ್ತು ಮನೋಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮತ್ತೊಂದು ಅಪಘಾತದಲ್ಲಿ, ಶುಕ್ರವಾರ ಸಂಜೆ ಶೇಷಾದ್ರಿಪುರಂ ಸಂಚಾರ ಪೊಲೀಸ್ ವ್ಯಾಪ್ತಿಯ ಓಕಲಿಪುರಂ ಬಸ್ ನಿಲ್ದಾಣದ ಬಳಿ ಮಾಧ್ಯಮ ಸಂಸ್ಥೆಯ ಉದ್ಯೋಗಿಯೊಬ್ಬರು ಟ್ರಕ್ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ.
Advertisement