

ಮಡಿಕೇರಿ: ಫೇಸ್‌ಬುಕ್‌ನಲ್ಲಿ ಪರಿಚಯವಾದ ಮಹಿಳೆ ಮಾತು ನಂಬಿ ಮಂಡ್ಯದಿಂದ ಮಡಿಕೇರಿಗೆ ಹೋಗಿದ್ದ ವ್ಯಕ್ತಿಯೊಬ್ಬ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಹಣ ಹಾಗೂ ವಸ್ತುಗಳನ್ನು ಕಳೆದುಕೊಂಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಹೇಶ್ ಎಂಬಾತ ಒಬ್ಬನೇ ಬಂದಿರುವುದನ್ನು ಗಮನಿಸಿದ ಮಹಿಳೆ ಮಡಿಕೇರಿಯ ಮಂಗಳಾದೇವಿ ನಗರದ ಮನೆಯೊಂದಕ್ಕೆ ಕರೆಸಿಕೊಂಡಿದ್ದಾಳೆ.
ಕೆಲಹೊತ್ತು ಮಹೇಶನ ಜೊತೆ ಪಾನೀಯ ಸೇವಿಸಿದ ಮಹಿಳೆ ಸಂಬಂಧಿಕರೊಬ್ಬರು ಮೃತಪಟ್ಟಿರುವುದಾಗಿ ತುರ್ತು ಕರೆಬಂದಿದ್ದಾಗಿ ಹೇಳಿ ಅಲ್ಲಿಂದ ಹೊರಬಂದಿದ್ದಾಳೆ. ಅದೇ ಸಮಯದಲ್ಲಿ ಮನೆಗೆ ನುಗ್ಗಿದ ನಾಲ್ವರು ಯುವಕರು ಮಹೇಶ ಬಳಿ ಇದ್ದ ಹಣ ಹಾಗೂ ವಸ್ತುಗಳನ್ನು ಕಿತ್ತುಕೊಂಡು ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮನೆಯಲ್ಲಿ ಕೂಡಿಹಾಕಿ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಮಧ್ಯೆ ಶೌಚಕ್ಕೆ ಹೋಗುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಅರಬೆತ್ತಲೆಯಲ್ಲೇ ಓಡಿ ಹೋಗಿ ಮಡಿಕೇರಿ ನಗರ ಪೊಲೀಸರಿಗೆ ದೂರು ನೀಡಿದ್ದಾನೆ. ಈ ಕೃತ್ಯವನ್ನು ಹನಿಟ್ರ್ಯಾಪ್ ಪ್ರಕರಣವೆಂದು ಪರಿಗಣಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Advertisement