

ಕಲಬುರಗಿ: ಆಳಂದ ಮತಗಳ್ಳತನ ಆರೋಪವನ್ನು ಆಳಂದದ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಅವರು ನಿರಾಕರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಚುನಾವಣೆಗೂ ಮೊದಲು ಇಂತಹ ಆಧಾರರಹಿತ ಆರೋಪಗಳನ್ನು ಮಾಡುವುದು ಹಾಲಿ ಶಾಸಕ ಬಿ.ಆರ್. ಪಾಟೀಲ್ ಅವರ ಅಭ್ಯಾಸವಾಗಿದೆ. ಪ್ರಸ್ತುತ ಮಾಡಿರುವ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದು ಹೇಳಿದರು.
ಡಿಸೆಂಬರ್ 15 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ನವದೆಹಲಿಯಲ್ಲಿ ನಡೆಯಲಿರುವ ಹೋರಾಟದ ವೇಳೆ ತಮ್ಮತ್ತ ಜನರ ಗಮನ ಸೆಳೆಯುವುದು ಪಾಟೀಲ್ ಅವರ ಉದ್ದೇಶವಾಗಿದೆ. ಸಚಿವ ಸ್ಥಾನ ಪಡೆಯಲು ಪಾಟೀಲ್ ಇಂತಹ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ತಿಳಿಸಿದರು.
ಸುಭಾಷ್ ಅವರ ಮಗ ಮತ್ತು ಬಿಜೆಪಿ ನಾಯಕ ಹರ್ಷಾನಂದ್ ಅವರೂ ಕೂಡ ಇದೇ ಪ್ರಕರಣದಲ್ಲಿ ಆರೋಪಿಗಳಾಗಿದ್ದು, ಅವರೂ ಕೂಡ ಆರೋಪವನ್ನು ನಿರಾಕರಿಸಿದ್ದಾರೆ.
ಈ ಪ್ರಕರಣದಲ್ಲಿ ನಮ್ಮ ಯಾವುದೇ ಪಾತ್ರವಿಲ್ಲ. ಸರ್ಕಾರ ತನ್ನ ಅಧಿಕಾರಿಗಳನ್ನು ಬಳಸಿಕೊಂಡು ನನ್ನನ್ನು ಮತ್ತು ನನ್ನ ತಂದೆಯನ್ನು ಪ್ರಕರಣದಲ್ಲಿ ಸಿಲುಕಿಸಿದೆ ಎಂದು ಆರೋಪಿಸಿದ್ದಾರೆ.
ಇದು ಬಿಜೆಪಿ ವಿರುದ್ಧ ಕಾಂಗ್ರೆಸ್ ಹೆಣೆಯುತ್ತಿರುವ ರಾಜಕೀಯ ತಂತ್ರವಾಗಿದೆ. ಜನರು ಕಾಂಗ್ರೆಸ್ ಅನ್ನು ತಿರಸ್ಕರಿಸಿದ್ದಾರೆ. ಅದಕ್ಕಾಗಿಯೇ ಮತ ಕಳ್ಳತನದ ಆರೋಪಗಳನ್ನು ಎತ್ತುವ ಮೂಲಕ ಜನರ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ನನ್ನ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಮತ್ತು ರಾಜಕೀಯ ಪ್ರೇರಿತ ಎಂಬುದನ್ನು ನ್ಯಾಯಾಲಯದಲ್ಲಿ ಸಾಬೀತುಪಡಿಸುತ್ತೇನೆಂದು ಹೇಳಿದರು.
Advertisement