

ಹುಬ್ಬಳ್ಳಿ: ಸಾರ್ವಜನಿಕವಾಗಿ ಅಸಭ್ಯ ವರ್ತನೆ ತೋರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗತೊಡಗಿದೆ. ಇಂಥಹದ್ದೇ ಘಟನೆ ಹುಬ್ಬಳ್ಳಿಯ ಈಶ್ವರ ನಗರದಲ್ಲಿ ವರದಿಯಾಗಿದೆ. ಕಂಡಕಂಡಲ್ಲಿ ಕಾಮಚೇಷ್ಟೇ ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಮಹಿಳೆಯರು ಹಿಗ್ಗಾ-ಮುಗ್ಗಾ ಥಳಿಸಿದ್ದಾರೆ.
ನಿನ್ನೆ ಸಂಜೆ ಬಡಾವಣೆಗೆ ಆಗಮಿಸಿದ್ದ ವ್ಯಕ್ತಿ, ಬಡಾವಣೆಯ ಮಹಿಳೆಯರಿಗೆ ಚುಡಾಯಿಸುತ್ತಿದ್ದ, ಅಸಭ್ಯವಾಗಿ ವರ್ತಿಸುತ್ತಿದ್ದ. ಇದನ್ನು ಗಮನಿಸಿದ ಸ್ಥಳೀಯರು, ವಿಕೃತ ಕಾಮಿಯನ್ನು ಕಂಬಕ್ಕೆ ಕಟ್ಟಿ, ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆದರೆ ಈ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೇ, ಕೇಸ್ ದಾಖಲಿಸದೇ ಬಿಟ್ಟು ಕಳುಹಿಸಿದ್ದಾರೆ.
Advertisement