ಬೆಳೆ ವಿಮೆ ಯೋಜನೆ: ರೈತರಿಗೆ ನೀಡಿರುವ ಪರಿಹಾರದ ಬಗ್ಗೆ ಶ್ವೇತಪತ್ರ ಹೊರಡಿಸಿ; ಕೇಂದ್ರ ಸರ್ಕಾರಕ್ಕೆ ಈಶ್ವರ್ ಖಂಡ್ರೆ ಆಗ್ರಹ

ಯೋಜನೆಯನ್ನು ಬಿಜೆಪಿ ಪ್ರಾಯೋಜಿತ 'ಗೋಲ್ಮಾಲ್' ಎಂದು ಕರೆದಿರುವ ಸಚಿವರು, ಯೋಜನೆ ಬಗ್ಗೆ ಶ್ವೇತಪತ್ರ ಹೊರಡಿಸಿದರೆ ಖಾಸಗಿ ವಿಮಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಹೇಗೆ ಲಾಭ ಮಾಡಿಕೊಡುತ್ತಿದೆ ಎನ್ನುವುದು ಬಟಾಬಯಲಾಗಲಿದೆ.
Eshwar khandre
ಅರಣ್ಯ ಸಚಿವ ಈಶ್ವರ್ ಖಂಡ್ರೆ
Updated on

ಬೆಂಗಳೂರು: ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ ಕಂತಿನ ಹಣ ಎಷ್ಟು? ಈವರೆಗೆ ರೈತರಿಗೆ ನೀಡಿರುವ ಪರಿಹಾರ ಎಷ್ಟು ಎಂಬುದರ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಸಚಿವ ಈಶ್ವರ್ ಖಂಡ್ರೆಯವರು ಸೋಮವಾರ ಆಗ್ರಹಿಸಿದ್ದಾರೆ.

ಸದನದಲ್ಲಿ ಬೆಳೆ ವಿಮೆ ಯೋಜನೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾಗಿ ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಈಶ್ವರ್ ಖಂಡ್ರೆಯವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಯೋಜನೆಯನ್ನು ಬಿಜೆಪಿ ಪ್ರಾಯೋಜಿತ 'ಗೋಲ್ಮಾಲ್' ಎಂದು ಕರೆದಿರುವ ಸಚಿವರು, ಯೋಜನೆ ಬಗ್ಗೆ ಶ್ವೇತಪತ್ರ ಹೊರಡಿಸಿದರೆ ಖಾಸಗಿ ವಿಮಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಹೇಗೆ ಲಾಭ ಮಾಡಿಕೊಡುತ್ತಿದೆ ಎನ್ನುವುದು ಬಟಾಬಯಲಾಗಲಿದೆ ಎಂದು ಹೇಳಿದ್ದಾರೆ.

ದೇಶಾದ್ಯಂತ ಬೆಳೆ ವಿಮೆ ಯೋಜನೆ ಜಾರಿಯಾದ ದಿನದಿಂದ ಈವರೆಗೆ ವಿಮಾ ಕಂಪನಿಗಳು ಉದ್ದಾರ ಆಗಿದೆಯೇ ಹೊರತು ರೈತರಲ್ಲ. ಇದೊಂದು ಬಿಜೆಪಿ ಪ್ರಾಯೋಜಿತ ಪಕ್ಕಾ ಗೋಲ್ಮಾಲ್ ಯೋಜನೆ ಎಂದು ತಿಳಿಸಿದ್ದಾರೆ.

Eshwar khandre
532 ಎಕರೆ ಸರ್ಕಾರಿ ಭೂಮಿ ಕಬಳಿಕೆ ಯತ್ನ: CID ತನಿಖೆ ಕೋರಿ ಮುಖ್ಯಮಂತ್ರಿಗೆ ಸಚಿವ ಈಶ್ವರ್ ಖಂಡ್ರೆ ಪತ್ರ

ಕೋವಿಡ್ ಸಮಯದಲ್ಲಿ ಜನರು ಆಕ್ಸಿಜನ್ ಸಿಗದೆ ರೆಮಿಡಿ ಸಿವೀರ್ ಚುಚ್ಚುಮದ್ದು ಸಿಗದೆ, ಉದ್ಯೋಗವೂ ಇಲ್ಲದೆ ಹಸಿವಿನಿಂದ ಬಳಲುತ್ತಿದ್ದಾಗ ಮನೆಯಲ್ಲಿ ಬಾಗಿಲು ಮುಚ್ಚಿ ಕುಳಿತಿದ್ದ ಖೂಬಾ ಈಗ ಬೀದಿಯಲ್ಲಿ ನಿಂತು ವೀರಾವೇಷದಿಂದ ಮಾತನಾಡಿದರೆ ಜನ ನಂಬುವುದಿಲ್ಲ. ರಾಜ್ಯದ ಜನರಿಗೆ ಸತ್ಯದ ಅರಿವಿದೆ. ಖೂಬಾಗೆ ಮಾಡಲು ಕೆಲಸವಿಲ್ಲ. ಈಗ ನಿರುದ್ಯೋಗಿಯಾಗಿದ್ದಾರೆ. ಹೀಗಾಗಿ ಮಾಧ್ಯಮ ಹೇಳಿಕೆ ನೀಡುತ್ತಾ, ಕಾಲ ತಳ್ಳುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com