

ಕೊಪ್ಪಳ: ಬೊಲೆರೊ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ದಾರುಣ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಕೊಪ್ಪಳ ತಾಲೂಕಿನ ಹೊಸಹಳ್ಳಿ ನಿವಾಸಿಗಳಾದ 17 ವರ್ಷದ ವಾಜಿದ್, ರಾಜಾಹುಸೇನ್ (17) ಮತ್ತು ಗಂಗಾವತಿ ತಾಲೂಕಿನ ಶ್ರೀರಾಮನಗರ ನಿವಾಸಿ ಆಸೀಫ್ (18) ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಬೊಲೆರೊ ವಾಹನ ಚಾಲಕ ಪರಾರಿಯಾಗಿದ್ದಾನೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Advertisement