

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕಾರಣರಾದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ (Mallikarjun Kharge) ಭಾರತ ರತ್ನ (Bharat Ratna) ಪ್ರಶಸ್ತಿ ನೀಡಬೇಕೆಂದು ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಮನವಿ ಮಾಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಮಾತನಾಡಿದ ತಿಪ್ಪಣ್ಣಪ್ಪ, ಕಲ್ಯಾಣ ಕರ್ನಾಟಕದ ವಿಶೇಷ ಅಭಿವೃದ್ಧಿಗಾಗಿ ಭಾರತದ ಸಂವಿಧಾನಕ್ಕೆ ಸೇರಿಸಲಾದ ಅನುಚ್ಛೇದ 371(ಜೆ) ಅವಿರೋಧಾಗಿ ಪಾಸ್ ಆಗಿದೆ. ಮಲ್ಲಿಕಾರ್ಜುನ ಖರ್ಗೆ ಸಚಿವರಾಗಿದ್ದಾಗ ರಾಜ್ಯಕ್ಕೆ, ದೇಶಕ್ಕೆ ಅವರ ಸೇವೆ ಅಪಾರ. ಹೀಗಾಗಿ ಅವರಿಗೆ ಭಾರತ ರತ್ನ ನೀಡಬೇಕೆಂದು ಒತ್ತಾಯಿಸಿದರು. ಮಲ್ಲಿಕಾರ್ಜುನ ಖರ್ಗೆ ಕಲಬುರಗಿಗೆ ಇಎಸ್‌ಐ ಆಸ್ಪತ್ರೆ ತಂದಿದ್ದಾರೆ. ಉತ್ತರ ಕರ್ನಾಟಕದಲ್ಲಿ ರೈಲು ಇಲ್ಲದ ಭಾಗಗಳಿಗೆ ರೈಲು ತಂದಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಪ್ರಸ್ತುತ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆ ಪರಿಗಣಿಸಿ ಖರ್ಗೆ ಅವರನ್ನು ಗೌರವಿಸಬೇಕೆಂದು ಕೇಳಿದರು.
Advertisement