Complainant Chinnaiah
ಸಿಎನ್ ಚಿನ್ನಯ್ಯ

ಧರ್ಮಸ್ಥಳ ಬುರುಡೆ ಕೇಸ್: ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗ ಜೈಲಿನಿಂದ ರಿಲೀಸ್

ಆತನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ನ.24ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪಡೆಯಲು 1 ಲಕ್ಷ ಭದ್ರತಾ ಠೇವಣಿ ನೀಡಬೇಕು ಎಂದು ಷರತ್ತು ವಿಧಿಸಿತ್ತು.
Published on

ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಅವರನ್ನು ಶಿವಮೊಗ್ಗ ಜೈಲಿನಿಂದ ಗುರುವಾರ ಬೆಳಿಗ್ಗೆ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು.

ಆತನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ನ.24ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪಡೆಯಲು 1 ಲಕ್ಷ ಭದ್ರತಾ ಠೇವಣಿ ನೀಡಬೇಕು ಎಂದು ಷರತ್ತು ವಿಧಿಸಿತ್ತು.

ಆದರೆ ಭದ್ರತಾ ಠೇವಣಿ ಮೊತ್ತ ಪಾವತಿಸಲು ವಿಳಂಬವಾದ ಹಿನ್ನೆಲೆಯಲ್ಲಿ ಬಿಡುಗಡೆ ಆಗಿರಲಿಲ್ಲ. ಮಂಗಳೂರಿನಿಂದ ಬುಧವಾರ ರಾತ್ರಿ ಶಿವಮೊಗ್ಗಕ್ಕೆ ಬಂದಿದ್ದ ಚಿನ್ನಯ್ಯನ ಪತ್ನಿ ಮಲ್ಲಿಕಾ ಹಾಗೂ ಸಹೋದರಿ ಮತ್ತು ಚಿನ್ನಯ್ಯನ ಪರ ವಕೀಲರು ಇಲ್ಲಿನ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ರಂಗನಾಥ್ ಅವರಿಗೆ ಜಾಮೀನು ಪ್ರಕ್ರಿಯೆಯ ದಾಖಲೆಗಳನ್ನು ಸಲ್ಲಿಸಿದ್ದರು. ಹೀಗಾಗಿ ಬೆಳಿಗ್ಗೆ 8.30ಕ್ಕೆ ಬಿಡುಗಡೆ ಮಾಡಲಾಯಿತು.

ಚಿನ್ನಯ್ಯನ ಬಿಡುಗಡೆ ಹಿನ್ನೆಲೆಯಲ್ಲಿ ಇಲ್ಲಿನ ಸೋಗಾನೆಯ ಕೇಂದ್ರ ಕಾರಾಗೃಹದ ಬಳಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಜೈಲಿನ ಆವರಣಕ್ಕೆ ತೆರಳಲು ಮಾಧ್ಯಮದವರಿಗೆ ನಿರ್ಬಂಧ ವಿಧಿಸಲಾಗಿತ್ತು. ಬುಧವಾರ ಸಂಜೆಯೇ ಕಾರಾಗೃಹಕ್ಕೆ ಕೋರ್ಟ್ ಆದೇಶ ಬಂದಿತ್ತು.

Complainant Chinnaiah
Dharmasthala case: 'ಕೆಲವು ವ್ಯಕ್ತಿಗಳ ಆಜ್ಞೆಯ ಮೇರೆಗೆ ಇದನ್ನು ಮಾಡಿದ್ದೆ'; ಮ್ಯಾಜಿಸ್ಟ್ರೇಟ್ ಮುಂದೆ ದೂರುದಾರ ಚಿನ್ನಯ್ಯ

ಇದರಿಂದ ಇಂದು ಬೆಳಗ್ಗೆ ಜೈಲಿನಿಂದ ಚಿನ್ನಯ್ಯ ಬಿಡುಗಡೆ ಆಗಿದ್ದಾನೆ. ಈತ ಪ್ರತಿ ಎರಡು ದಿನಕ್ಕೊಮ್ಮೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ಸಹಿ ಹಾಕಬೇಕು. ಹಾಗೂ ಮಾಧ್ಯಮಗಳೊಂದಿಗೆ ಮಾತನಾಡಬಾರದು ಎಂದು ಬೆಳ್ತಂಗಡಿ ನ್ಯಾಯಾಲಯವು ಷರತ್ತು ವಿಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com