ಬೆಂಗಳೂರು: ಕರ್ತವ್ಯ ಮುಗಿಸಿ ತನ್ನ ಪೇಯಿಂಗ್ ಗೆಸ್ಟ್ ವಸತಿಗೃಹಕ್ಕೆ ಹಿಂತಿರುಗುತ್ತಿದ್ದ 28 ವರ್ಷದ ವೈದ್ಯೆಯೊಬ್ಬರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಜಿಬಿ ಲೇಔಟ್‌ನಲ್ಲಿ ಮಂಗಳವಾರ ಮತ್ತು ಬುಧವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, ಮಹಿಳೆ ಆಸ್ಪತ್ರೆಯಲ್ಲಿ ಕರ್ತವ್ಯ ಮುಗಿಸಿ ರಾತ್ರಿ 1 ಗಂಟೆ ಸುಮಾರಿಗೆ ತನ್ನ ಪಿಜಿಗೆ ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಸ್ಕೂಟರ್‌ನಲ್ಲಿ ಅವರ ಬಳಿ ಬಂದು ನಿಲ್ಲಿಸುತ್ತಾನೆ.
ಸ್ಕೂಟರ್‌ನಿಂದ ಇಳಿದು ಬಸ್ ನಿಲ್ದಾಣ ಸ್ಥಳದ ಬಗ್ಗೆ ವಿಚಾರಿಸುತ್ತ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಮತ್ತು ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ಮಹಿಳೆ ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆಕೆ ಕೂಗಿಕೊಂಡಾಗ ಆರೋಪಿ ತನ್ನ ಸ್ಕೂಟರ್‌ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಈ ಸಂಬಂಧ ಡಿಸೆಂಬರ್ 17 ರಂದು ಮಹಿಳೆ ನೀಡಿದ ದೂರಿನ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 74 ಅಡಿಯಲ್ಲಿ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿಯನ್ನು ಪತ್ತೆಹಚ್ಚಲು ಮತ್ತು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement