ವಿಧಾನಪರಿಷತ್: ವಿಪಕ್ಷಗಳ ಪ್ರತಿಭಟನೆ ನಡುವೆ 'ದ್ವೇಷ ಭಾಷಣ' ಮಸೂದೆಗೆ ಮೇಲ್ಮನೆ ಅಂಗೀಕಾರ!

ವಿರೋಧ ಪಕ್ಷಗಳು ಇದನ್ನು 'ಭಾಷಣ ಸ್ವಾತಂತ್ರ್ಯದ ಮೇಲೆ ನೇರ ದಾಳಿ, ರಾಜಕೀಯ ದ್ವೇಷಗಳಿಗೆ ಅಪಾಯಕಾರಿ ಅಸ್ತ್ರ ಎಂದು ಕರೆದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದವು.
Legislative council
ವಿಧಾನಪರಿಷತ್
Updated on

ಬೆಳಗಾವಿ: ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕುವ ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ಅನ್ನು ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ನಡುವೆ ಶುಕ್ರವಾರ ವಿಧಾನಪರಿಷತ್ತಿನಲ್ಲಿಯೂ ಅಂಗೀಕರಿಸಲಾಯಿತು.

ವಿರೋಧ ಪಕ್ಷಗಳು ಇದನ್ನು 'ಭಾಷಣ ಸ್ವಾತಂತ್ರ್ಯದ ಮೇಲೆ ನೇರ ದಾಳಿ, ರಾಜಕೀಯ ದ್ವೇಷಗಳಿಗೆ ಅಪಾಯಕಾರಿ ಅಸ್ತ್ರ ಎಂದು ಕರೆದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದವು.

ಇದರ ನಡುವೆ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ಅನ್ನು ಮಂಡಿಸಿದರು. ಗುರುವಾರ ವಿಧಾನಸಭೆಯಲ್ಲಿ ಈ ವಿಧೇಯಕವನ್ನು ಅಂಗೀಕರಿಸಲಾಗಿತ್ತು.

ಪ್ರಸ್ತಾವಿತ ಮಸೂದೆಯು ಪೊಲೀಸ್ ರಾಜ್ಯ "ಅಘೋಷಿತ ತುರ್ತುಸ್ಥಿತಿ"ಗೆ ಕಾರಣವಾಗುತ್ತದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಮಸೂದೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದವು. ದ್ವೇಷದ ಅಪರಾಧಕ್ಕಾಗಿ 50,000 ರೂ.ಗಳ ದಂಡದೊಂದಿಗೆ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಒಂದು ವರ್ಷ ಜೈಲು ಶಿಕ್ಷೆಯನ್ನು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಪುನರಾವರ್ತಿತ ಅಪರಾಧಗಳಿಗೆ, ಗರಿಷ್ಠ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಬಿಜೆಪಿಯ ಆರೋಪಗಳನ್ನು ನಿರಾಕರಿಸಿದ ಗೃಹ ಸಚಿವರು, ಬಿಜೆಪಿ ಸರ್ಕಾರವಿರುವ ಮಹಾರಾಷ್ಟ್ರದಲ್ಲಿರುವಂತೆ ಕಾನೂನು ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು.

ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ, ವಿಧೇಯಕ ಕಾನೂನು ಆಗಿ ಜಾರಿಗೆ ಬಂದರೆ ರಾಜಕೀಯ ದ್ವೇಷಕ್ಕೆ ಅಪಾಯಕಾರಿ ಅಸ್ತ್ರವಾಗುತ್ತದೆ. ಕಾಂಗ್ರೆಸ್ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ ಇತಿಹಾಸವಿದೆ. ಪೊಲೀಸ್ ರಾಜ್ಯವನ್ನಾಗಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.

Legislative council
'ಬೆಂಕಿ' ಗದ್ದಲದ ನಡುವೆಯೇ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಅಂಗೀಕಾರ

ಮಸೂದೆಯನ್ನು ಕಾನೂನಾಗಿ ಅಂಗೀಕರಿಸಿದಾಗ ರಾಜಕೀಯ ವಿರೋಧಿಗಳ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲು ಬಳಸಲಾಗುತ್ತದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ಗದ್ದಲದ ನಡುವೆ ಮಸೂದೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಮತಕ್ಕೆ ಹಾಕಿದಾಗ ಧ್ವನಿ ಮತದಿಂದ ವಿಧೇಯಕ ಅಂಗೀಕಾರವಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com